ಒಡಿಶಾ | ಸರಕಾರಿ ಶಾಲೆಯಲ್ಲಿ ಶಿಕ್ಷಕನಿಂದ 7 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

ಸಾಂದರ್ಭಿಕ ಚಿತ್ರ | NDTV
ಭುವನೇಶ್ವರ: ಒಡಿಶಾದ ಸುಂದರಗಢ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಶಿಕ್ಷಕನೋರ್ವನ ವಿರುದ್ಧ ಏಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಸಂತ್ರಸ್ತ ಬಾಲಕಿಯರು ಸಂಸ್ಕೃತ ಶಿಕ್ಷಕನ ವಿರುದ್ಧ ಮೊದಲು ಮುಖ್ಯ ಶಿಕ್ಷಕಿಗೆ ದೂರು ನೀಡಿದ್ದರು. ಆ ಬಳಿಕ ಮುಖ್ಯ ಶಿಕ್ಷಕಿ ಗುರುಂಡಿಯಾ ಪೊಲೀಸ್ ಠಾಣೆಗೆ ಲಿಖಿತ ದೂರನ್ನು ನೀಡಿದ್ದಾರೆ.
ಆರೋಪಿ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
Next Story





