ಜೈಪುರ | ಸರಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 8 ರೋಗಿಗಳು ಮೃತ್ಯು

Photo|businesstoday
ಜೈಪುರ : ಜೈಪುರದ ಸರಕಾರಿ ಸವಾಯಿ ಮಾನ್ ಸಿಂಗ್(ಎಸ್ಎಂಎಸ್) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಎಂಟು ಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ. ಅಗ್ನಿ ಅವಘಡದ ವೇಳೆ 11 ರೋಗಿಗಳು ನ್ಯೂರೋ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತೀವ್ರ ನಿಗಾ ಘಟಕದ ಉಸ್ತುವಾರಿ ಡಾ.ಅನುರಾಗ್ ಧಕಾಡ್ ಹೇಳಿದ್ದಾರೆ.
ವಿವಿಧ ದಾಖಲೆಗಳು, ಐಸಿಯು ಉಪಕರಣಗಳು, ರಕ್ತದ ಮಾದರಿ ಟ್ಯೂಬ್ಗಳು ಮತ್ತು ಇತರ ವಸ್ತುಗಳು ಬೆಂಕಿಯಿಂದ ಸುಟ್ಟುಹೋಗಿವೆ. ಅಗ್ನಿ ಅವಘಢದ ವೇಳೆ ಆಸ್ಪತ್ರೆಯ ಸಿಬ್ಬಂದಿ ಮತ್ತು ರೋಗಿಯ ಸಹಾಯಕರು ಕೆಲ ರೋಗಿಗಳನ್ನು ಸ್ಥಳಾಂತರಿಸಿದರು. ಬಳಿಕ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಆದರೆ ಮೃತ ರೋಗಿಗಳ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ನಿರ್ಲಕ್ಷ್ಯದ ಆರೋಪವನ್ನು ಮಾಡಿದ್ದಾರೆ.
ಜೈಪುರ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ, ಸಂಸದೀಯ ವ್ಯವಹಾರಗಳ ಸಚಿವ ಜೋಗರಾಮ್ ಪಟೇಲ್, ಗೃಹ ಖಾತೆ ರಾಜ್ಯ ಸಚಿವ ಜವಾಹರ್ ಸಿಂಗ್ ಬೆಧಾಮ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.





