ಅಪ್ರಾಪ್ತ ವಯಸ್ಕನಿಂದ 8 ವರ್ಷದ ಬಾಲಕಿಯ ಅತ್ಯಾಚಾರ

ಸಾಂದರ್ಭಿಕ ಚಿತ್ರ | PC : freepik.com
ಭಿಂಡ್: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಎಂಟು ವರ್ಷ ವಯಸ್ಸಿನ ನೆರೆಹೊರೆಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ 17 ವರ್ಷ ಪ್ರಾಯದ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಆತನನ್ನು ಬಾಲನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಒಂದೇ ವಸತಿಪ್ರದೇಶದಲ್ಲಿ ವಾಸವಾಗಿರುವ ಆರೋಪಿಯು, ಬಾಲಕಿಯು ಆಕೆಯ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಒಳ ನುಗ್ಗಿದ್ದಾನೆ ಹಾಗೂ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಮುಕೇಶ್ ಕುಮಾರ್ ಶಾಕ್ಯ ಅವರು ತಿಳಿಸಿದ್ದಾರೆ.
ಬಾಲಕಿಯ ಆಕ್ರಂದನ ಕೇಳಿ, ಜನರು ಸ್ಥಳಕ್ಕೆ ಬಂದು, ಹದಿಹರೆಯದ ಬಾಲಕನನ್ನು ಸೆರೆಹಿಡಿದರೆಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆತನನ್ನು ಸುಧಾರಣಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಶಾಕ್ಯ ತಿಳಿಸಿದ್ದಾರೆ.
Next Story





