ಗಡಿ ನಿಯಂತ್ರಣ ರೇಖೆ ಬಳಿ ಪಾಕ್ನಿಂದ ಗುಂಡಿನ ದಾಳಿ: 9 ನಾಗರಿಕರು ಮೃತ್ಯು, 38 ಜನರಿಗೆ ಗಾಯ ; ವರದಿ

Photo credit: PTI
ಹೊಸದಿಲ್ಲಿ: ಮಂಗಳವಾರ ತಡರಾತ್ರಿ ಜಮ್ಮುಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಗೆ 9 ಮಂದಿ ನಾಗರಿಕರು ಮೃತಪಟ್ಟಿದ್ದು, 38 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವ ಬಗ್ಗೆ indianexpress.com ವರದಿ ಮಾಡಿದೆ.
ಮೆಂಧರ್ನಲ್ಲಿ ಓರ್ವರು ಮೃತಪಟ್ಟರೆ, ಪೂಂಚ್ನಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ ಪೂಂಚ್ನಲ್ಲಿ ನಡೆದ ಶೆಲ್ ದಾಳಿಯಲ್ಲಿ ಇಬ್ಬರು ಸಿಆರ್ಪಿಎಫ್ ಜವಾನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿರುವ ಬಗ್ಗೆ indianexpress.com ವರದಿ ಮಾಡಿದೆ.
ದಾಳಿಗಳ ಕುರಿತು ಚರ್ಚಿಸಲು ಜಮ್ಮುಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಗಡಿ ಜಿಲ್ಲೆಗಳ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಜೈಶೆ ಮೊಹಮ್ಮದ್ ಮತ್ತು ಲಷ್ಕರೆ ತೈಬಾ ನಡೆಸುತ್ತಿರುವ ಭಯೋತ್ಪಾದಕ ತರಬೇತಿ ಶಿಬಿರಗಳ ಮೇಲೆ ಭಾರತ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ ಈ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾದೆ.





