ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಮಾವು ತುಂಬಿದ್ದ ಲಾರಿ: 9 ಮಂದಿ ಮೃತ್ಯು, 11 ಜನರಿಗೆ ಗಾಯ

ಸಾಂದರ್ಭಿಕ ಚಿತ್ರ
ಅಮರಾವತಿ: ಮಾವು ತುಂಬಿದ್ದ ಲಾರಿಯೊಂದು ಮಿನಿ ಟ್ರಕ್ ಮೇಲೆ ಮಗುಚಿ ಬಿದ್ದ ಪರಿಣಾಮ, 9 ಮಂದಿ ಮೃತಪಟ್ಟು, 11 ಮಂದಿ ಗಾಯಗೊಂಡಿರುವ ಘಟನೆ ರವಿವಾರ ತಡ ರಾತ್ರಿ ಆಂಧ್ರತಪ್ರದೇಶದ ಅನ್ನಮಯ್ಯ ಜಿಲ್ಲೆಯ ರೆಡ್ಡಿಚೆರುವು ಬಳಿ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ವೇಳೆ ಟ್ರಕ್ ನಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡಿದ್ದರಿಂದ, ಮಿನಿ ಟ್ರಕ್ ಮೇಲೆ ಅದು ಉರುಳಿ ಬಿದ್ದು ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story





