Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‌ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ...

‌ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ, ಪೊಲೀಸರು ತನಿಖೆ ನಡೆಸುವ ಸಾಮರ್ಥ್ಯ ಹೊಂದಿಲ್ಲ: ಸುಪ್ರೀಂ ಕೋರ್ಟ್ ಅಸಮಾಧಾನ

ಮಣಿಪುರ ಡಿಜಿಪಿಗೆ ಖುದ್ದು ಹಾಜರಾಗಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ1 Aug 2023 4:31 PM IST
share
‌ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ, ಪೊಲೀಸರು ತನಿಖೆ ನಡೆಸುವ ಸಾಮರ್ಥ್ಯ ಹೊಂದಿಲ್ಲ: ಸುಪ್ರೀಂ ಕೋರ್ಟ್ ಅಸಮಾಧಾನ

ಹೊಸದಿಲ್ಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತಂತೆ ಅಲ್ಲಿನ ಪೊಲೀಸರಿಂದ ನಡೆಯುತ್ತಿರುವ ತನಿಖೆ “ಜಡತ್ವದಿಂದ” ಕೂಡಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಹೇಳುವ ಮೂಲಕ ಕೇಂದ್ರ ಮತ್ತು ಮಣಿಪುರ ಸರ್ಕಾರಗಳಿಗೆ ಮಾತಿನ ಛಾಟಿಯೇಟು ಬೀಸಿದೆ.

ಹಿಂಸಾತ್ಮಕ ಘಟನೆಗಳು ನಡೆದು ಸುಮಾರು ಮೂರು ತಿಂಗಳುಗಳೇ ಸಂದರೂ ಎಫ್‌ಐಆರ್‌ಗಳು ದಾಖಲಾಗದೇ ಇರುವುದು ಮತ್ತು ಇಲ್ಲಿಯ ತನಕ ದಾಖಲಾಗಿರುವ 6000 ಎಫ್‌ಐಆರ್‌ಗಳಲ್ಲಿ ಕೆಲವೇ ಕೆಲವು ಮಂದಿಯನ್ನು ಬಂಧಿಸಿರುವುದರ ಬಗ್ಗೆ ಸುಪ್ರೀಂ ಕೋರ್ಟ್‌ ತನ್ನ ಆಘಾತ ವ್ಯಕ್ತಪಡಿಸಿದೆಯಲ್ಲದೆ ಶುಕ್ರವಾರ ಅಪರಾಹ್ನ 2 ಗಂಟೆಗೆ ಮಣಿಪುರದ ಪೊಲೀಸ್‌ ಮಹಾನಿರ್ದೇಶಕರು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಬೇಕು ಎಂದು ಆದೇಶಿಸಿದೆ.

“ಆರಂಭಿಕ ಮಾಹಿತಿ ಅವಲೋಕಿಸಿದಾಗ ತನಿಖೆ ತೀರಾ ನಿಧಾನವಾಗಿದೆ ಎಂಬುದು ಹೊರನೋಟಕ್ಕೆ ತಿಳಿದು ಬರುತ್ತದೆ. ಘಟನೆ ನಡೆದು ನಂತರ ಎಫ್‌ಐಆರ್‌ ದಾಖಲಾಗುವಲ್ಲಿ ವಿಳಂಬ ಮತ್ತು ಸಾಕ್ಷಿಗಳ ಹೇಳಿಕೆಗೆಳ ದಾಖಲಾತಿಗಳಲ್ಲೂ ಕರ್ತವ್ಯಲೋಪವಾಗಿದೆ ಹಾಗೂ ಕೆಲವೇ ಕೆಲ ಮಂದಿಯನ್ನು ಬಂಧಿಸಲಾಗಿದೆ. ಮಣಿಪುರ ಡಿಜಿಪಿ ಅವರು ಶುಕ್ರವಾರ 2 ಗಂಟೆಗೆ ಹಾಜರಾಗಿ ನ್ಯಾಯಾಲಯದ ಪ್ರಶ್ನೆಗಳಿಗೆ ಉತ್ತರಿಸಬೇಕು,” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಮಣಿಪುರ ಹಿಂಸಾಚಾರದ ಕುರಿತು ದಾಖಲಾದ ಹಲವು ಅರ್ಜಿಗಳು ಹಾಗೂ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲ ಮತ್ತು ಮನೋಜ್‌ ಮಿಶ್ರಾ ಅವರ ಪೀಠ ನಡೆಸುತ್ತಿದೆ.

ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಮಾತನಾಡಿ ಇಲ್ಲಿಯ ತನಕ 6532 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಹಾಗೂ ಅವುಗಳಲ್ಲಿ 11 ಪ್ರಕರಣಗಳು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಾಗಿವೆ ಎಂದರು.

ಇತ್ತೀಚೆಗೆ ವೈರಲ್‌ ಆದ ವೀಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಬಂಧನ ಯಾವಾಗ ನಡೆಯಿತು ಎಂದು ನ್ಯಾಯಾಲಯ ಕೇಳಿದಾಗ ನಿರ್ದಿಷ್ಟ ಉತ್ತರವನ್ನು ಸಾಲಿಸಿಟರ್‌ ಜನರಲ್‌ ಅವರಿಗೆ ನೀಡಲಾಗಲಿಲ್ಲ ಹಾಗೂ ವೀಡಿಯೋ ಹೊರಬಿದ್ದ ನಂತರ ಎಂದು ಹೇಳಿದರು.

“ಮೇ 4ರಂದು ನಡೆದ ಗಂಭೀರ ಘಟನೆಯ ಎಫ್‌ಐಆರ್‌ ಜುಲೈ 7ರಂದು ದಾಖಲಾಗಿದೆ,” ಎಂಬ ಅಂಶವನ್ನು ಸಿಜೆಐ ತಿಳಿದು ಆಘಾತ ವ್ಯಕ್ತಪಡಿಸಿದರು.

“ರಾಜ್ಯ ಪೊಲೀಸರು ತನಿಖೆ ನಡೆಸುವ ಸಾಮರ್ಥ್ಯ ಹೊಂದಿಲ್ಲ, ಪರಿಸ್ಥಿತಿ ಅವರ ನಿಯಂತ್ರನ ಮೀರಿದೆ, 6000 ಎಫ್‌ಐಆರ್‌ಗಳಲ್ಲಿ ಕೇವಲ 7 ಬಂಧನವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದಾಗ ಮಾತನಾಡಿದ ಸಾಲಿಸಿಟರ್‌ ಜನರಲ್‌, ವೈರಲ್‌ ವೀಡಿಯೋ ಪ್ರಕರಣ ಕುರಿತಂತೆ 7 ಮಂದಿಯ ಬಂಧನವಾಗಿದೆ ಹಾಗೂ 250 ಮಂದಿಯನ್ನು ಬಂಧಿಸಲಾಗಿದ್ದರೆ 12000 ಮಂದಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲಾಗಿದೆ ಎಂದರು.

ಪರಿಸ್ಥಿತಿಯ ಸಂಪೂರ್ಣ ಅವಲೋಕನ, ಪುನರ್ವಸತಿ ಮುಂತಾದ ವಿಚಾರಗಳತ್ತ ಗಮನ ಹರಿಸಲು ಮಾಜಿ ಹೈಕೋರ್ಟ್‌ ನ್ಯಾಯಾಧೀಶರನ್ನೊಳಗೊಂಡ ಸಮಿತಿಯನ್ನು ರಚಿಸುವ ಸಾಧ್ಯತೆಯ ಕುರಿತು ಸಿಜೆಐ ಸುಳಿವು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X