ಶ್ರೀನಗರ| ನೌಗಮ್ ಪೊಲೀಸ್ ಠಾಣೆಯಲ್ಲಿ ಸ್ಪೋಟ ಪ್ರಕರಣ: ಆಕಸ್ಮಿಕ ಘಟನೆ ಎಂದ ಡಿಜಿಪಿ

Photo: PTI
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಬಳಿಯ ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಸ್ಪೋಟ ಆಕಸ್ಮಿಕ ಘಟನೆ ಎಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ನಳಿನ್ ಪ್ರಭಾತ್ ಸ್ಪಷ್ಟನೆ ನೀಡಿದ್ದಾರೆ.
ನೌಗಮ್ ಪೊಲೀಸ್ ಠಾಣೆಯಲ್ಲಿ ಸ್ಫೋಟಕಗಳು ಸ್ಫೋಟಗೊಂಡ ನಂತರ 9 ಜನರು ಮೃತಪಟ್ಟು 32 ಮಂದಿ ಗಾಯಗೊಂಡಿದ್ದರು. ಮೃತರಲ್ಲಿ ಹೆಚ್ಚಿನವರು ಪೊಲೀಸರು ಮತ್ತು ವಿಧಿವಿಜ್ಞಾನ ತಂಡದ ಅಧಿಕಾರಿಗಳಾಗಿದ್ದಾರೆ. ಇತ್ತೀಚೆಗೆ ಹರ್ಯಾಣದ ಫರಿದಾಬಾದ್ನಿಂದ ತಂದ ಸ್ಫೋಟಕ ವಸ್ತುಗಳನ್ನು ಪರಿಶೀಲಿಸುತ್ತಿದ್ದಾಗ ಘಟನೆ ಸಂಭವಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಜಮ್ಮುಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್, ಸ್ಫೋಟವು ಆಕಸ್ಮಿಕ ಘಟನೆಯಾಗಿದೆ. ಈ ಘಟನೆಗೆ ಬೇರೆ ಕಾರಣ ಹುಡುಕುವ ಅಗತ್ಯವಿಲ್ಲ ಎಂದು ಹೇಳಿದರು.
Next Story





