ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರ ಜೊತೆಗಿನ ಫೋಟೋ ವೈರಲ್ : ಮತ್ತೆ ಟೀಕೆಗೆ ಗುರಿಯಾದ ಬಿಜೆಪಿ ಸಚಿವ ವಿಜಯ್ ಶಾ
ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಸಚಿವ!

ವಿಜಯ್ ಶಾ (Photo credit: aajtak.in)
ಭೋಪಾಲ್ : ಕರ್ನಲ್ ಸೋಫಿಯಾ ಖುರೇಷಿಯನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಮಧ್ಯಪ್ರದೇಶದ ಬುಡಕಟ್ಟು ಕಲ್ಯಾಣ ಇಲಾಖೆ ಸಚಿವ ವಿಜಯ್ ಶಾ, ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಗೌಪ್ಯತೆಗೆ ಧಕ್ಕೆ ತಂದೆ ಆರೋಪದಲ್ಲಿ ಮತ್ತೆ ಸುದ್ದಿಯಾಗಿದ್ದಾರೆ.
ಖಾಂಡ್ವಾದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯ ಕುಟುಂಬವನ್ನು ವಿಜಯ್ ಶಾ ಭೇಟಿ ಮಾಡಿ ಪರಿಹಾರ ಚೆಕ್ ಹಸ್ತಾಂತರಿಸಿದರು. ಭೇಟಿಯ ಸಮಯದಲ್ಲಿ ಪಕ್ಷದ ಸ್ಥಳೀಯ ಕಾರ್ಯಕರ್ತರು ಮತ್ತು ಸಂತ್ರಸ್ತ ಕುಟುಂಬದ ಸದಸ್ಯರ ಜೊತೆ ಫೋಟೊ ಕ್ಲಿಕ್ ಮಾಡಿದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
ವೈರಲ್ ಚಿತ್ರಗಳು ಸಂತ್ರಸ್ತೆಯ ಸಂಬಂಧಿಕರ ಗುರುತನ್ನು ಬಹಿರಂಗಪಡಿಸಿದೆ. ಇದರ ಬೆನ್ನಲ್ಲೇ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಿದ್ದಕ್ಕಾಗಿ ಸಚಿವರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ.
Next Story





