ಸಿಜೆಐ ಬಿ.ಆರ್.ಗವಾಯಿ ಮೇಲೆ ಶೂ ಎಸೆತ ಪ್ರಕರಣ: ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಎಜಿ ಒಪ್ಪಿಗೆ

ವಕೀಲ ರಾಕೇಶ್ ಕಿಶೋರ್ (Photo: ANI)
ಹೊಸದಿಲ್ಲಿ : ಸಿಜೆಐ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಪ್ರಾರಂಭಿಸಲು ಭಾರತದ ಅಟಾರ್ನಿ ಜನರಲ್ (ಎಜಿ) ಒಪ್ಪಿಗೆ ನೀಡಿದ್ದಾರೆ
ಕಳೆದ ವಾರ ನ್ಯಾಯಾಲಯದ ಕಲಾಪದ ವೇಳೆ ಸಿಜೆಐ ಬಿಆರ್ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆಯಲು ಪ್ರಯತ್ನಿಸಿದ್ದರು. ಅವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣವನ್ನು ಪ್ರಾರಂಭಿಸಲು ಭಾರತದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಒಪ್ಪಿಗೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ, ಹಿರಿಯ ವಕೀಲ ವಿಕಾಸ್ ಸಿಂಗ್ ಮತ್ತು ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಜಂಟಿಯಾಗಿ ಎರಡನೇ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಕುರಿತು ತ್ವರಿತ ವಿಚಾರಣೆಯನ್ನು ನಡೆಸುವಂತೆ ಮನವಿ ಮಾಡಿದ್ದಾರೆ.
Next Story





