Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ರೈತರಿಗೆ ಎಲ್ಲವೂ ಉಚಿತವಾಗಿ ಯಾಕೆ...

"ರೈತರಿಗೆ ಎಲ್ಲವೂ ಉಚಿತವಾಗಿ ಯಾಕೆ ಬೇಕು?": ಕೃಷಿ ಸಾಲ ಮನ್ನಾ ಕುರಿತು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿವಾದಾತ್ಮಕ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ1 Nov 2025 4:56 PM IST
share
ರೈತರಿಗೆ ಎಲ್ಲವೂ ಉಚಿತವಾಗಿ ಯಾಕೆ ಬೇಕು?:  ಕೃಷಿ ಸಾಲ ಮನ್ನಾ ಕುರಿತು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿವಾದಾತ್ಮಕ ಹೇಳಿಕೆ

ಮುಂಬೈ: ರೈತರಿಗೆ ಎಲ್ಲವೂ ಉಚಿತವಾಗಿ ಯಾಕೆ ಬೇಕು? ರೈತರು ಯಾವಾಗಲೂ ಸಾಲ ಮನ್ನಾ ಮಾಡುವಂತೆ ಕೇಳುತ್ತಿರುವುದೇಕೆ? ಎಂದು ಪ್ರಶ್ನಿಸುವ ಮೂಲಕ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿವಾದವನ್ನು ಸೃಷ್ಟಿಸಿದ್ದಾರೆ.

ರ‍್ಯಾಲಿಯಲ್ಲಿ ಮಾತನಾಡಿದ ಡಿಸಿಎಂ ಅಜಿತ್ ಪವಾರ್, ರೈತರು ಯಾವಾಗಲೂ ಕೃಷಿ ಸಾಲ ಮನ್ನಾ ಮಾಡಬೇಕೆಂದು ಏಕೆ ಒತ್ತಾಯಿಸುತ್ತಿದ್ದಾರೆ ಎಂದು ಕೇಳಿದರು. ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರ ಅವಧಿಯಲ್ಲಿ ಮತ್ತು ನಂತರ ದೇವೇಂದ್ರ ಫಡ್ನವೀಸ್, ಉದ್ಧವ್ ಠಾಕ್ರೆ ನೇತೃತ್ವದ ರಾಜ್ಯ ಸರಕಾರ ಕೃಷಿ ಸಾಲಗಳನ್ನು ಮನ್ನಾ ಮಾಡಿದ್ದವು. ಕೃಷಿ ಸಾಲ ಮನ್ನಾ ಆಗಾಗ್ಗೆ ಮಾಡಬೇಕಾದ ವಿಷಯವಲ್ಲ ಎಂದು ಹೇಳಿದರು.

ರಾಜ್ಯ ಸರಕಾರ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲವನ್ನು ನೀಡುತ್ತದೆ. ಆದರೂ, ರೈತರು ಸಾಲ ಮನ್ನಾ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಇದು ಒಳ್ಳೆಯ ಅಭ್ಯಾಸವಲ್ಲ. ನಾವು ಆಯ್ಕೆಯಾಗಿ ಅಧಿಕಾರಕ್ಕೆ ಬರಲು ಬಯಸಿದ್ದೆವು. ಆದ್ದರಿಂದ ನಾವು 2024ರ ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕೃಷಿ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದೇವೆ. ಈಗ ರೈತರು ಕೃಷಿ ಸಾಲ ಮನ್ನಾವನ್ನು ಒತ್ತಾಯಿಸುತ್ತಿದ್ದಾರೆ. ಆದರೆ ಇದನ್ನು ಜಾರಿಗೆ ತರುವುದು ಸುಲಭವಲ್ಲ. ಇದನ್ನು ಕಾರ್ಯಗತಗೊಳಿಸಲು ಸಾವಿರಾರು ಕೋಟಿ ರೂ. ಅಗತ್ಯವಿದೆ ಎಂದು ಅಜಿತ್ ಪವಾರ್ ಹೇಳಿದರು.

ರೈತರ ಸಾಲಮನ್ನಾ ಕುರಿತ ಅಜಿತ್ ಪವಾರ್ ಹೇಳಿಕೆಗೆ ವಿರೋಧ ಪಕ್ಷಗಳು ವ್ಯಾಪಕವಾಗಿ ಟೀಕಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್, “ಸಾಲಮನ್ನಾ ಮಾಡುವ ಬಗ್ಗೆ ಮಹಾಯುತಿ ಚುನಾವಣಾ ಪ್ರಚಾರದ ಸಮಯದಲ್ಲೇ ಭರವಸೆ ನೀಡಿತ್ತು. ಈಗ ಆ ಭರವಸೆಯಿಂದ ನುಣುಚಿಕೊಳ್ಳುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ, ಆದ್ದರಿಂದಲೇ ಅವರು ಸಾಲಮನ್ನಾ ಮಾಡುವಂತೆ ಕೇಳುತ್ತಿದ್ದಾರೆ. ಅವರು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಮಹಾಯುತಿಗೆ ನೆನಪಿಸುತ್ತಿದ್ದಾರೆ. ಈ ಸರಕಾರ ಕೃಷಿ ಸಾಲ ಮನ್ನಾ ಮಾಡಲು ಸಾಧ್ಯವಾಗದಿದ್ದರೆ ಅಧಿಕಾರದಿಂದ ಕೆಳಗಿಳಿಯಬೇಕು. ಕೊಟ್ಟ ಮಾತುಗಳನ್ನು ಪೂರೈಸಲು ಸಾಧ್ಯವಾಗದಿದ್ದರೆ ಅವರಿಗೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X