Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪವಾರ್ ಬಣಗಳ ಪುನರ್ಮಿಲನಕ್ಕೆ ಅಜಿತ್ ತಾಯಿ...

ಪವಾರ್ ಬಣಗಳ ಪುನರ್ಮಿಲನಕ್ಕೆ ಅಜಿತ್ ತಾಯಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ2 Jan 2025 10:00 AM IST
share
ಪವಾರ್ ಬಣಗಳ ಪುನರ್ಮಿಲನಕ್ಕೆ ಅಜಿತ್ ತಾಯಿ ಸಲಹೆ

ಪುಣೆ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಾರ್ಟಿ (ಎನ್‍ಸಿಪಿ)ಯ ಉಭಯ ಬಣಗಳು ಒಗ್ಗೂಡುವಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಾಯಿ ಆಶಾತಾಯಿ ಸಲಹೆ ಮಾಡಿದ್ದಾರೆ.

ಪಂಡರಾಪುರ ವಿಠಲ-ರುಕುಮಾಯಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಮಗ ಅಜಿತ್ ಪವಾರ್ ಹಾಗೂ ಭಾವ ಶರದ್ ಪವಾರ್ ನೇತೃತ್ವದ ಪಕ್ಷಗಳು ಮತ್ತೆ ಒಂದಾಗಬೇಕು ಎನ್ನುವ ಬಯಕೆ ನನ್ನದು ಎಂದು ಸ್ಪಷ್ಟಪಡಿಸಿದರು. "ಪವಾರ್ ಕುಟುಂಬಗಳಲ್ಲಿ ಇರುವ ಭಿನ್ನಾಭಿಪ್ರಾಯ ಶೀಘ್ರ ಬಗೆಹರಿಯಬೇಕು ಎನ್ನುದು ನನ್ನ ಆಸೆ. ಪಾಂಡುರಂಗ ನನ್ನ ಪ್ರಾರ್ಥನೆಗೆ ಉತ್ತರಿಸುತ್ತಾನೆ ಎಂಬ ವಿಶ್ವಾಸ ನನ್ನದು" ಎಂದು ಹೇಳಿದರು.

ಎನ್‍ಸಿಪಿ ಹಾಗೂ ಪವಾರ್ ಕುಟುಂಬಗಳಲ್ಲಿ 2023ರ ವಿಭಜನೆ ಬಳಿಕ ಮಾವ ಮತ್ತು ಅಳಿಯನ ಬಣಗಳ ನಡುವೆ ರಾಜಿ ಸಂಧಾನ ಪ್ರಯತ್ನಗಳು ನಡೆಯುತ್ತಿವೆ ಎಂಬ ಊಹಾಪೋಹಗಳ ಬೆನ್ನಲ್ಲೇ ಆಶಾತಾಯಿ ಈ ಹೇಳಿಕೆ ನೀಡಿದ್ದಾರೆ.

ಕುಟುಂಬದ ಇತರ ಸದಸ್ಯರು ಕೂಡಾ ಏಕೀಕರಣಕ್ಕೆ ಕರೆ ನೀಡಿದ್ದಾರೆ. ಡಿಸೆಂಬರ್ 13ರಂದು ಶಾಸಕ ರೋಹಿತ್ ಪವಾರ್ ಅವರ ತಾಯಿ ಸುನಂದಾ ಪವಾರ್ ಕೂಡಾ ಎನ್‍ಸಿಪಿ ಸಂಸ್ಥಾಪಕ ಶರದ್ ಪವಾರ್ ಮತ್ತು ಅಜಿತ್ ಮತ್ತೆ ಒಂದಾಗಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಡಿಸೆಂಬರ್ 12ರಂದು ಅಜಿತ್ ಪವಾರ್ ಅವರು ಪಕ್ಷದ ಹಿರಿಯ ಮುಖಂಡರ ಜತೆಗೆ ಮಾವನ ಮನೆಗೆ ಭೇಟಿ ನೀಡಿದ ಪಕ್ಷದ ಸಂಸ್ಥಾಪಕರಿಗೆ ಜನ್ಮದಿನದ ಶುಭ ಕೋರಿದಲ್ಲಿಂದ ಉಭಯ ಬಣಗಳ ಮರು ಸೇರ್ಪಡೆ ಬಗೆಗೆ ವದಂತಿಗಳು ಹುಟ್ಟಿಕೊಂಡಿದ್ದವು. ಪಕ್ಷ ವಿಭಜನೆಯಾದ ಬಳಿಕ ವೈಯಕ್ತಿಕವಾಗಿ ಇಬ್ಬರು ಭೇಟಿಯಾದದ್ದು ಅದೇ ಮೊದಲು.

ಆಶಾತಾಯಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎನ್‍ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್, 84 ವರ್ಷದ ಪವಾರ್ ಅವರನ್ನು ತಂದೆ ಸಮಾನ ಎಂದು ಬಣ್ಣಿಸಿದ್ದಾರೆ. "ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಶುಭಾಶಯ ಕೋರಲು ನಾವು ಹೋಗಿದ್ದೆವು. ಅವರೊಂದಿಗೆ ಉತ್ತಮ ಸಂಬಂಧ ಹೊಂದುವುದು ನಮ್ಮ ಬಯಕೆ. ನಾಳೆ ಏನಾಗುತ್ತದೆ ಎನ್ನುವುದು ಯಾರಿಗೂ ತಿಳಿಯದು. ಆದರೆ ಮತ್ತೆ ಒಂದಾದರೆ ಎಲ್ಲರೂ ಅತೀವವಾಗಿ ಸಂಭ್ರಮಿಸುತ್ತಾರೆ" ಎಂದು ವಿವರಿಸಿದ್ದಾರೆ. ಈ ಮರು ಸಂಘಟನೆಗೆ ಆರ್‍ಪಿಐ ಮುಖಂಡ ಹಾಗೂ ಕೇಂದ್ರ ಸಾಮಾಜಿಕ ನ್ಯಾಯಖಾತೆಯ ರಾಜ್ಯ ಸಚಿವ ರಾಮದಾಸ್ ಅಠಾವಳೆ ಕೂಡಾ ದನಿಗೂಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X