ಅಲಿಗಢ ಮುಸ್ಲಿಮ್ ವಿಶ್ವವಿದ್ಯಾಲಯಕ್ಕೆ ಭಯೋತ್ಪಾದಕ ದಾಳಿ ಬೆದರಿಕೆ

ಅಲಿಗಢ ಮುಸ್ಲಿಮ್ ವಿಶ್ವವಿದ್ಯಾಲಯ
ಲಕ್ನೋ, ಜು. 23: ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ಕೇಂದ್ರ ಶಿಕ್ಷಣ ಸಚಿವಾಲಯ ನೀಡಿದ ಬಳಿಕ, ಅಲಿಗಢ ಮುಸ್ಲಿಮ್ ವಿಶ್ವವಿದ್ಯಾನಿಲಯ (ಎಎಮ್ಯು)ದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದರು.
‘‘ವಿಶ್ವವಿದ್ಯಾನಿಲಯದ ಪ್ರವೇಶ ದ್ವಾರಗಳಲ್ಲಿ ನಾವು ತಪಾಸಣೆಯನ್ನು ಹೆಚ್ಚಿಸಿದ್ದೇವೆ’’ ಎಂದು ಎಎಮ್ಯು ಪ್ರಾಕ್ಟರ್ ಮುಹಮ್ಮದ್ ವಸೀಮ್ ಅಲಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದರು.
‘‘ನಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸಾಧ್ಯವಿರುವ ಎಲ್ಲಾ ಭದ್ರತಾ ಕ್ರಮಗಳನ್ನು ನಾವು ಶೀಘ್ರದಲ್ಲೇ ಜಾರಿಗೊಳಿಸಲಿದ್ದೇವೆ’’ ಎಂದು ಅವರು ಹೇಳಿದರು.
ವಿಶ್ವವಿದ್ಯಾನಿಲಯದ ಭದ್ರತಾ ಏರ್ಪಾಡುಗಳ ಮರುಪರಿಶೀಲನೆ ಬಗ್ಗೆ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ನಾವು ಚರ್ಚಿಸಲಿದ್ದೇವೆ ಎಂಬುದಾಗಿಯೂ ಅವರು ಹೇಳಿದರು.
Next Story





