ಬ್ಯಾಂಕ್ಗೆ ನಕಲಿ ಗ್ಯಾರಂಟಿ : ಅನಿಲ್ ಅಂಬಾನಿಯ ರಿಲಯನ್ಸ್ ಪವರ್ ನ ಮುಖ್ಯ ಹಣಕಾಸು ಅಧಿಕಾರಿಯ ಬಂಧನ

ಅಶೋಕ್ ಕುಮಾರ್ ಪಾಲ್ (Photo: reliancepower.co.in)
ಹೊಸದಿಲ್ಲಿ : ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬ್ಯಾಂಕ್ಗೆ ನಕಲಿ ಗ್ಯಾರಂಟಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್ನ ಹಿರಿಯ ಹಣಕಾಸು ಅಧಿಕಾರಿ, ಅನಿಲ್ ಅಂಬಾನಿಯ ಸಹಾಯಕ ಅಶೋಕ್ ಕುಮಾರ್ ಪಾಲ್ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಅಶೋಕ್ ಪಾಲ್ ಬಂಧನವು 68.2 ಕೋಟಿ ರೂಪಾಯಿ ಮೌಲ್ಯದ ನಕಲಿ ಬ್ಯಾಂಕ್ ಗ್ಯಾರಂಟಿ ದಂಧೆಗೆ ಸಂಬಂಧಿಸಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ರಾತ್ರಿ ಅಶೋಕ್ ಪಾಲ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಆ ಬಳಿಕ ದಿಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಶೋಕ್ ಪಾಲ್ ನನ್ನು ಎರಡು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿದೆ.
ರಿಲಯನ್ಸ್ ಪವರ್ ಅಂಗ ಸಂಸ್ಥೆಯಾದ ರಿಲಯನ್ಸ್ ಎನ್ಯು ಬಿಇಎಸ್ಎಸ್ ಲಿಮಿಟೆಡ್ಗಾಗಿ ಭಾರತೀಯ ಸೌರ ಇಂಧನ ನಿಗಮಕ್ಕೆ 68.2 ಕೋಟಿ ಮೌಲ್ಯದ ಬ್ಯಾಂಕ್ ಗ್ಯಾರಂಟಿ ನೀಡಿತ್ತು. ಅದು ನಕಲಿ ಎಂದು ಆರೋಪಿಸಲಾಗಿದೆ.
Next Story





