Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ 15 ವರ್ಷಗಳಲ್ಲಿ...

ಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ. 1,045ರಷ್ಟು ಏರಿಕೆ: ವರದಿ

► ಕರ್ನಾಟಕದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆಸ್ತಿ ಮೌಲ್ಯ ಗರಿಷ್ಠ ಏರಿಕೆ ► ಪಟ್ಟಿಯಲ್ಲಿದೆ ಅನಂತಕುಮಾರ್ ಹೆಗಡೆ ಸಹಿತ ರಾಜ್ಯದ ಇನ್ನೂ 5 ಬಿಜೆಪಿ ಸಂಸದರ ಹೆಸರು

ವಾರ್ತಾಭಾರತಿವಾರ್ತಾಭಾರತಿ22 Feb 2024 11:19 PM IST
share
ಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ. 1,045ರಷ್ಟು ಏರಿಕೆ: ವರದಿ

ಹೊಸದಿಲ್ಲಿ: ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು ರೂ. 35.18 ಕೋಟಿಯಿಂದ ರೂ. 402.79 ಕೋಟಿಗೆ ಏರಿಕೆಯಾಗಿದೆ ಎಂದು ಗುರುವಾರ ಖಾಸಗಿ ಚುನಾವಣಾ ನಿಗಾ ಸಂಸ್ಥೆಯೊಂದು ಹೇಳಿದೆ ಎಂದು deccanherald.com ವರದಿ ಮಾಡಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪ್ರಕಾರ, ಈ ಸಂಸದರ ಪೈಕಿ ಕರ್ನಾಟಕದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿಯವರ ಆಸ್ತಿ ಮೌಲ್ಯ ಗರಿಷ್ಠ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಶೇ. 9,098ರಷ್ಟು ಏರಿಕೆಯಾಗಿದೆ. 2004ರಲ್ಲಿ ರೂ. 54.8 ಲಕ್ಷದಷ್ಟಿದ್ದ ಅವರ ಆಸ್ತಿ ಮೌಲ್ಯವು 2019ರ ವೇಳೆಗೆ ರೂ. 50.41 ಕೋಟಿಯಷ್ಟಾಗಿದ್ದು, ಆ ಮೂಲಕ ರೂ. 49.86 ಕೋಟಿ ಏರಿಕೆಯಾದಂತಾಗಿದೆ.

ಈ ಪಟ್ಟಿಯಲ್ಲಿ ಇನ್ನೂ ಐವರು ಕರ್ನಾಟಕದ ಸಂಸದರಿದ್ದು (ಎಲ್ಲರೂ ಬಿಜೆಪಿ ಸಂಸದರು), 2004ರಿಂದ ಪುನರಾಯ್ಕೆಗೊಂಡಿರುವ ಯಾವುದೇ ರಾಜ್ಯದ ಪೈಕಿ ಅತ್ಯಧಿಕ ಸಂಸದರಾಗಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ್ (ದಾವಣಗೆರೆ) ಆಸ್ತಿ ಮೌಲ್ಯವು ರೂ. 5.02 ಕೋಟಿಯಿಂದ ರೂ. 38.01 ಕೋಟಿಗೆ (ಶೇ. 656), ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ) ಆಸ್ತಿ ಮೌಲ್ಯವು ರೂ. 46.39 ಲಕ್ಷದಿಂದ ರೂ. 20.93 ಕೋಟಿಗೆ (ಶೇ. 4413), ಕೇಂದ್ರ ಸಚಿವ ಪಹ್ಲಾದ್ ಜೋಶಿ (ಧಾರವಾಡ) ಆಸ್ತಿ ಮೌಲ್ಯ ರೂ. 77.60 ಲಕ್ಷದಿಂದ ರೂ. 11.13 ಕೋಟಿಗೆ (ಶೇ. 1,33), ಅನಂತಕುಮಾರ್ ಹೆಗಡೆ (ಉತ್ತರ ಕನ್ನಡ) ಆಸ್ತಿ ಮೌಲ್ಯವು ರೂ. 12.06 ಲಕ್ಷದಿಂದ ರೂ. 8.47 ಕೋಟಿಗೆ (ಶೇ. 6,928) ಹಾಗೂ ಪಿ.ಸಿ.ಗದ್ದಿಗೌಡರ್ (ಬಾಗಲಕೋಟೆ) ಆಸ್ತಿ ಮೌಲ್ಯವು ರೂ. 53.75 ಲಕ್ಷದಿಂದ ರೂ. 4.39 ಕೋಟಿಗೆ (ಶೇ. 718) ಏರಿಕೆ ಕಂಡಿದೆ.

2004ರಿಂದ ಪುನರಾಯ್ಕೆಗೊಂಡಿರುವ 23 ಸಂಸದರ ಪೈಕಿ 17 ಸಂಸದರು ಬಿಜೆಪಿಗೆ ಸೇರಿದ್ದರೆ, ಮೂವರು ಸಂಸದರು ಕಾಂಗ್ರೆಸ್ ಪಕ್ಷಕ್ಕೆ, ಎಐಎಂಐಎಂ, ಶಿವಸೇನೆ ಹಾಗೂ ಬಿಜೆಡಿಗೆ ಸೇರಿದ ತಲಾ ಓರ್ವ ಸಂಸದರಿದ್ದಾರೆ. ಈ ಎಲ್ಲ ಸಂಸದರ ಸರಾಸರಿ ಆಸ್ತಿ ಮೌಲ್ಯವು 2004ರಲ್ಲಿ 1.52 ಕೋಟಿಯಾಗಿದ್ದರೆ, 2009ರಲ್ಲಿ 3.46 ಕೋಟಿಗೆ, 2014ರಲ್ಲಿ 9.85 ಕೋಟಿಗೆ ಹಾಗೂ 2019ರಲ್ಲಿ ರೂ. 17.51 ಕೋಟಿಗೆ ಏರಿಕೆಯಾಗಿದೆ.

ಈ ಎಲ್ಲ ಸಂಸದರ ಸರಾಸರಿ ಆಸ್ತಿ ಮೌಲ್ಯದ ಏರಿಕೆ ರೂ. 15.98 ಕೋಟಿ ಅಥವಾ ಶೇ. 1,045ರಷ್ಟಾಗಿದೆ ಎಂಬ ಸಂಗತಿ ಅವರೆಲ್ಲ ಚುನಾವಣಾ ಆಯೋಗದೆದುರು ಸಲ್ಲಿಸಿರುವ ಪ್ರಮಾಣ ಪತ್ರಗಳ ವಿಶ್ಲೇಷಣೆಯಿಂದ ಬೆಳಕಿಗೆ ಬಂದಿದೆ.

ಜಿಗಜಿಣಗಿಯ ನಂತರ ಬಿಜೆಪಿ ಸಂಸದೆ ಮೇನಕಾ ಗಾಂಧಿ (ಸುಲ್ತಾನ್ ಪುರ್) ಅವರ ಆಸ್ತಿ ಮೌಲ್ಯ ಅತ್ಯಧಿಕ ಏರಿಕೆಯಾಗಿದ್ದು, ರೂ. 6.66 ಕೋಟಿಯಿಂದ ರೂ. 55.69 ಕೋಟಿಗೆ ಏರಿಕೆಯಾಗಿದೆ. ಶೇಕಡಾವಾರು ಪ್ರಮಾಣದಲ್ಲಿ ಶೇ. 735ರಷ್ಟು ಏರಿಕೆ ಕಂಡಿದೆ. ಇವರ ನಂತರ ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ (ಗುರ್ಗಾಂವ್) ಅವರ ಆಸ್ತಿ ಮೌಲ್ಯ ರೂ. 5.51 ಕೋಟಿಯಿಂದ ರೂ. 42.09 ಕೋಟಿಗೆ ಏರಿಕೆಯಾಗಿದೆ (ಶೇ.‌664).

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 2004ರಲ್ಲಿದ್ದ ಆಸ್ತಿ ಮೌಲ್ಯವು ರೂ. 55.38 ಲಕ್ಷದಿಂದ 2009ರಲ್ಲಿ ರೂ. 2.32 ಕೋಟಿ, 2014ರಲ್ಲಿ ರೂ. 9.4 ಕೋಟಿ ಹಾಗೂ 2019ರಲ್ಲಿ 15.88 ಕೋಟಿಗೆ ಏರಿಕೆಯಾಗಿದೆ. ಇದು ಕಳೆದ 15 ವರ್ಷಗಳಲ್ಲಿ ಶೇ. 2,769ರಷ್ಟು ಏರಿಕೆಯಾಗಿದೆ. ಅವರ ತಾಯಿ ಹಾಗೂ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಸ್ತಿ ಮೌಲ್ಯವೂ ಶೇ. 1,280ರಷ್ಟು ಏರಿಕೆಯಾಗಿದ್ದು, 2004ರಲ್ಲಿ ರೂ. 85.68 ಲಕ್ಷದಷ್ಟಿದ್ದ ಅವರ ಆಸ್ತಿ ಮೌಲ್ಯವು 2019ರಲ್ಲಿ ರೂ. 11.82 ಕೋಟಿಗೆ ಏರಿಕೆಯಾಗಿದೆ.

ಕಾಂಗ್ರೆಸ್ ಪಕ್ಷದ ಮೂರನೆಯ ಸಂಸದರಾದ ಅಧೀರ್ ರಂಜನ್ ಚೌಧರಿ ಅವರ ಆಸ್ತಿ ಮೌಲ್ಯವು ರೂ. 1.93 ಕೋಟಿಯಿಂದ ರೂ. 10.13 ಕೋಟಿಗೆ ಏರಿಕೆಯಾಗಿದ್ದು, ಶೇ. 422ರಷ್ಟು ಏರಿಕೆ ಕಂಡಿದೆ.

ವಿಶ್ಲೇಷಣೆಯ ಪ್ರಕಾರ, ಈ ಪಟ್ಟಿಯಲ್ಲಿರುವ ಒಂಬತ್ತು ಸಂಸದರ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ. ಹಾಗೆಯೇ ಈ ಪಟ್ಟಿಯಲ್ಲಿ ಮೂವರು ಮಹಿಳಾ ಸಂಸದರು ಮಾತ್ರ ಇದ್ದು, ಈ ಪೈಕಿ ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ, ಬಿಜೆಪಿಯ ಮೇನಕಾ ಗಾಂಧಿ ಹಾಗೂ ಶಿವಸೇನೆಯ ಭವಾನ ಗೌಳಿ (ಯವತ್ಮಲ್ ವಾಶಿಂ) ಸೇರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X