ಕೋಝಿಕ್ಕೋಡ್ ಮೆಡಿಕಲ್ ಕಾಲೇಜಿನಲ್ಲಿ ಶಾರ್ಟ್ ಸರ್ಕ್ಯೂಟ್: ಉಸಿರುಗಟ್ಟಿ ನಾಲ್ವರು ಸಾವು

Photo credit: madhyamam.com
ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಉಸಿರುಗಟ್ಟುವಿಕೆಯಿಂದ ಸಾವುಗಳು ಸಂಭವಿಸಿವೆ.
ಪರಿಸ್ಥಿತಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತರಲಾಗಿದ್ದು, ಬೆಂಕಿಯಿಂದ ಯಾವುದೇ ಗಾಯಗಳು ವರದಿಯಾಗಿಲ್ಲ ಎಂದು ಆಸ್ಪತ್ರೆಯ ಅಧೀಕ್ಷಕರು ದೃಢಪಡಿಸಿದ್ದಾರೆ.
200 ಕ್ಕೂ ಅಧಿಕ ರೋಗಿಗಳನ್ನು ಸ್ಥಳಾಂತರಿಸಲಾಗಿದ್ದು, ಇದರಲ್ಲಿ ತುರ್ತು ವೈದ್ಯಕೀಯ ಸೇವೆ ಪಡೆಯುತ್ತಿದ್ದ ರೋಗಿಗಳೂ ಸೇರಿದ್ದಾರೆ.
Next Story





