ಇರಾನ್ ಮೇಲೆ ದಾಳಿ | ಮಧ್ಯಪ್ರಾಚ್ಯಕ್ಕೆ ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ

Photo Credit : PTI
ಹೊಸದಿಲ್ಲಿ: ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ಉದ್ಭವಿಸಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಆ ಪ್ರದೇಶಗಳಿಗೆ ತೆರಳುವ ತನ್ನ ಎಲ್ಲಾ ವಿಮಾನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ Air India ಪ್ರಕಟಿಸಿದೆ.
#TravelAdvisory
— Air India (@airindia) February 28, 2026
In view of the developing situation in parts of the Middle East, all Air India flights to all destinations in the Middle East have been suspended. We remain committed to maintaining the highest standards of safety for our passengers and crew. We will continue to…
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಣೆ ನೀಡಿರುವ Air India ಸಂಸ್ಥೆಯು, “ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಆ ಭಾಗಗಳಲ್ಲಿನ ಪ್ರಮುಖ ಸ್ಥಳಗಳಿಗೆ ಏರ್ ಇಂಡಿಯಾ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ,” ಎಂದು ತಿಳಿಸಿದೆ.
ಭದ್ರತಾ ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸಲಾಗುತ್ತಿದೆ. ಸುರಕ್ಷತೆ ಹಾಗೂ ಭದ್ರತಾ ವಾತಾವರಣವನ್ನು ನೋಡಿಕೊಂಡು, ಅಗತ್ಯವಿದ್ದಲ್ಲಿ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. ಪ್ರಯಾಣಿಕರಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಸಂಸ್ಥೆಯ ತಂಡಗಳು ಒದಗಿಸಲಿವೆ ಎಂದೂ ಸ್ಪಷ್ಟಪಡಿಸಲಾಗಿದೆ.
ಪ್ರಯಾಣಿಕರು ತಮ್ಮ ವಿಮಾನದ ಇತ್ತೀಚಿನ ಸ್ಥಿತಿಯನ್ನು ಸಂಸ್ಥೆಯ ಅಧಿಕೃತ ವೆಬ್ತಾಣದಲ್ಲಿ ಪರಿಶೀಲಿಸುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 24×7 ಕಾಲ್ ಸೆಂಟರ್ನ್ನು ಸಂಪರ್ಕಿಸಬಹುದಾಗಿದೆ. ಸಂಸ್ಥೆಯ ವೆಬ್ಸೈಟ್ನಲ್ಲಿ ಗಮನಿಸುವಂತೆ ತಿಳಿಸಲಾಗಿದೆ.







