ಜು.9ರ ಮುಷ್ಕರದಲ್ಲಿ ಬ್ಯಾಂಕ್ ಉದ್ಯೋಗಿಗಳ ಯೂನಿಯನ್ ಗಳು ಭಾಗಿ

ಸಾಂದರ್ಭಿಕ ಚಿತ್ರ | PTI
ಕೋಲ್ಕತಾ: ಕೇಂದ್ರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಒಕ್ಕೂಟಗಳು ಜು.9ರಂದು ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಬ್ಯಾಂಕಿಂಗ್ ಕ್ಷೇತ್ರವೂ ಭಾಗಿಯಾಗಲಿದೆ ಎಂದು ಬ್ಯಾಂಕ್ ಉದ್ಯೋಗಿಗಳ ಸಂಘವೊಂದು ಸೋಮವಾರ ತಿಳಿಸಿದೆ.
ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ ಜೊತೆ ಸಂಯೋಜಿತ ಬಂಗಾಳ ಪ್ರಾಂತೀಯ ಬ್ಯಾಂಕ್ ಉದ್ಯೋಗಿಗಳ ಸಂಘ ಸೇರಿದಂತೆ ಬ್ಯಾಂಕಿಂಗ್ ಕ್ಷೇತ್ರದ ಕಾರ್ಮಿಕ ಒಕ್ಕೂಟಗಳು ಸಾರ್ವತ್ರಿಕ ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿವೆ. ವಿಮಾ ಕ್ಷೇತ್ರವೂ ಮುಷ್ಕರದಲ್ಲಿ ಭಾಗಿಯಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಕೇಂದ್ರ ಸರಕಾರದ ಕಾರ್ಪೊರೇಟ್ ಪರ ಆರ್ಥಿಕ ಸುಧಾರಣೆಗಳು ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ಎಲ್ಲ ಕೈಗಾರಿಕೆಗಳಲ್ಲಿಯ 15 ಕೋಟಿಗೂ ಅಧಿಕ ಕಾರ್ಮಿಕರು ಮುಷ್ಕರದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ ಸಂಘವು ತಿಳಿಸಿದೆ.
Next Story





