ರಾಜಸ್ತಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಪ್ರಮಾಣ ವಚನ ಸ್ವೀಕಾರ
Photo: ಭಜನ್ ಲಾಲ್ ಶರ್ಮಾ( PTI)
ಜೈಪುರ್: ರಾಜಸ್ತಾನದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಭಜನ್ ಲಾಲ್ ಶರ್ಮಾ ಅವರು ತಮ್ಮ ಹುಟ್ಟುಹಬ್ಬ ದಿನದಂದೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ರಾಜ್ಯದ ಉಪ ಮುಖ್ಯಮಂತ್ರಿಯಾಗಿ ದಿಯಾ ಕುಮಾರಿ ಮತ್ತು ಪ್ರೇಮ ಚಂದ್ ಬೈರವ ಅವರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ನಡ್ಡಾ ಸೇರಿದಂತೆ ಕೇಂದ್ರದ ಪ್ರಮುಖ ನಾಯಕರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ತ್ರಿಪುರಾ ಮುಖ್ಯಮಂತ್ರಿ ಮಣಿಕ್ ಸಾಹಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿದಂತೆ ಹಲವು ಗಣ್ಯರು ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಿದ್ದರು.
Next Story