ಬಿಹಾರ| ಮನೆಯ ಮೇಲ್ಚಾವಣಿ ಕುಸಿತ: ಮೂವರು ಮಕ್ಕಳ ಸಹಿತ ಒಂದೇ ಕುಟುಂಬದ ಐವರು ಮೃತ್ಯು

Photo Credit : HT_PRINT
ಸರಣ್ (ಬಿಹಾರ): ಮನೆಯೊಂದರ ಮೇಲ್ಚಾವಣಿ ಕುಸಿದು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ರವಿವಾರ ಬಿಹಾರದ ಸರಣ್ ಜಿಲ್ಲೆಯ ಮಾನಸ್ ಗ್ರಾಮದಲ್ಲಿ ನಡೆದಿದೆ.
ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮೃತದೇಹಗಳನ್ನು ಹೊರ ತೆಗೆದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಸರಣ್ ಜಿಲ್ಲೆಯ ವಿಶೇಷ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಆಶಿಶ್, “ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.
30 ವರ್ಷಗಳಿಗಿಂತಲೂ ಹಳೆಯದಾಗಿದ್ದ ಮನೆಯು ಶಿಥಿಲಾವಸ್ಥೆಯಲ್ಲಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೃತ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಲಾಗಿದ್ದು, ಘಟನೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನೂ ಜಿಲ್ಲಾಡಳಿತಕ್ಕೆ ಪೊಲೀಸರು ರವಾನಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
Next Story





