ಬಿಹಾರ ವಿಧಾನಸಭಾ ಚುನಾವಣೆ : ಪಾಟ್ನಾದಲ್ಲಿ ಚುನಾವಣಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದ ಸಿಇಸಿ ಜ್ಞಾನೇಶ್ ಕುಮಾರ್ ನೇತೃತ್ವದ ನಿಯೋಗ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Photo: PTI)
ಹೊಸದಿಲ್ಲಿ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಭಾರತೀಯ ಚುನಾವಣಾ ಆಯೋಗದ(ಇಸಿಐ) ನಿಯೋಗ ಪಾಟ್ನಾಕ್ಕೆ ತೆರಳಿ ಪರಿಶೀಲನೆಯನ್ನು ನಡೆಸಿದೆ.
ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಕೂಡ ಈ ವೇಳೆ ನಿಯೋಗದಲ್ಲಿದ್ದರು.
ಈ ಕುರಿತು ಭಾರತೀಯ ಚುನಾವಣಾ ಆಯೋಗ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಡಾ.ಸುಖ್ಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ನೇತೃತ್ವದ ಭಾರತೀಯ ಚುನಾವಣಾ ಆಯೋಗದ ನಿಯೋಗ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲು ಪಾಟ್ನಾಗೆ ಆಗಮಿಸಿದೆ ಎಂದು ತಿಳಿಸಿದೆ.
ಬಿಹಾರ ಭೇಟಿಗೂ ಮುನ್ನ ಚುನಾವಣೆಯ ಸಂದರ್ಭದಲ್ಲಿ ನಿಯೋಜಿಸಲ್ಪಡುವ ಕೇಂದ್ರ ವೀಕ್ಷಕರಿಗೆ ಆಯೋಗವು ದಿಲ್ಲಿಯಲ್ಲಿ ವಿವರವಾದ ಮಾರ್ಗದರ್ಶನ ಸಭೆ ನಡೆಸಿತು.
Next Story





