ಪ್ರಧಾನಿ ಭೇಟಿ ವೇಳೆ ಬನಾರಸ್ ರೈಲು ನಿಲ್ದಾಣದಲ್ಲಿ ಬಿಜೆಪಿ ಶಾಸಕ ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ

Photo credit: indiatoday.in
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬನಾರಸ್ ರೈಲು ನಿಲ್ದಾಣಕ್ಕೆ ಭೇಟಿ ನೀಡುವ ಮುನ್ನ, ಬಿಜೆಪಿ ಶಾಸಕ ಸೌರಭ್ ಶ್ರೀವಾಸ್ತವ ಮತ್ತು ರೈಲ್ವೆ ರಕ್ಷಣಾ ಪಡೆ(ಆರ್ಪಿಎಫ್) ಸಿಬ್ಬಂದಿ ಮಧ್ಯೆ ಘರ್ಷಣೆ ನಡೆದಿದೆ. ಈ ಕುರಿತ ವೀಡಿಯೊ ವೈರಲ್ ಆಗಿದೆ.
ವರದಿಗಳ ಪ್ರಕಾರ, ಪ್ರಧಾನಿ ಆಗಮನದ ಹಿನ್ನೆಲೆ ಬನಾರಸ್ ರೈಲು ನಿಲ್ದಾಣದೊಳಗೆ ನಿರ್ಬಂಧವನ್ನು ವಿಧಿಸಲಾಗಿತ್ತು ಮತ್ತು ಬಿಗಿ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಸೌರಭ್ ಶ್ರೀವಾಸ್ತವ ಅವರು ಪಕ್ಷದ ಕಾರ್ಯಕರ್ತರನ್ನು ರೈಲ್ವೆ ನಿಲ್ದಾಣದೊಳಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ, ಈ ವೇಳೆ ಆರ್ಪಿಎಫ್ ಸಿಬ್ಬಂದಿ ಅವರನ್ನು ತಡೆದಿದ್ದಾರೆ ಎಂದು ಹೇಳಲಾಗಿದೆ.
ವೈರಲ್ ವೀಡಿಯೊದಲ್ಲಿ ಬಿಜೆಪಿ ಶಾಸಕ ಮತ್ತು ಆರ್ಪಿಎಫ್ ಸಿಬ್ಬಂದಿ ಪರಸ್ಪರ ತಳ್ಳಾಟ ನಡೆಸುತ್ತಿರುವುದು ಕಂಡು ಬಂದಿದೆ.
ಪ್ರಧಾನಿ ಮೋದಿ ಅವರು ವಾರಣಾಸಿಯಲ್ಲಿ ಬನಾರಸ್-ಖಜುರಾಹೊ ಮಾರ್ಗ ಸೇರಿದಂತೆ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಚಾಲನೆ ನೀಡಲು ಬನಾರಸ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು.
In UP's Varanasi, BJP MLA Saurabh Srivastava confronts RPF personnel over a karyakarta stopped at security check at Banaras railway station where PM Narendra Modi inaugrated 4 Vande Bharat trains. pic.twitter.com/YOyVZCtmmR
— Piyush Rai (@Benarasiyaa) November 8, 2025







