ಹುಸಿ ಬಾಂಬ್ ಬೆದರಿಕೆ | ದಿಲ್ಲಿಯಿಂದ ದುಬೈಗೆ ತೆರಳಬೇಕಿದ್ದ ವಿಮಾನದ ತಪಾಸಣೆ

Photo : PTI
ಹೊಸದಿಲ್ಲಿ: ದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳುತ್ತಿದ್ದ ವಿಮಾನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ, ಆ ವಿಮಾನವನ್ನು ತಪಾಸಣೆಗೊಳಪಡಿಸಲಾಯಿತು ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಸೋಮವಾರ ಬೆಳಗ್ಗೆ 9.35ರ ವೇಳೆಗೆ ಇಂದಿರಾ ಗಾಂಧಿ ವಿಮಾನ ನಿಲ್ದಾಣದ ದಿಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಕಚೇರಿಯು ದಿಲ್ಲಿಯಿಂದ ದುಬೈಗೆ ತೆರಳಬೇಕಿದ್ದ ವಿಮಾನದಲ್ಲಿ ಬಾಂಬ್ ಇರಿಸಿರುವುದಾಗಿ ಪ್ರತಿಪಾದಿಸಿರುವ ಈಮೇಲ್ ಸ್ವೀಕರಿಸಿತು” ಎಂದು ತಿಳಿಸಿದ್ದಾರೆ.
ಕೂಡಲೇ ವಿಮಾನದ ತಪಾಸಣೆ ನಡೆಸಲಾಯಿತಾದರೂ, ಯಾವುದೇ ಬಾಂಬ್ ಪತ್ತೆಯಾಗಲಿಲ್ಲ ಎಂದು ಅವರು ಹೇಳಿದ್ದಾರೆ.
Next Story





