ಸುಲಿಗೆ ಆರೋಪ: ಬಿಆರ್ಎಸ್ ಶಾಸಕ ಕೌಶಿಕ್ ರೆಡ್ಡಿ ಬಂಧನ

ಕೌಶಿಕ್ ರೆಡ್ಡಿ | Credit: X @/KaushikReddyBRS
Read more at: https://www.deccanherald.com/india/telangana/brs-mla-kaushik-reddy-arrested-in-extortion-case-3596468#google_vignette
ಹೈದರಾಬಾದ್: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣದ ಬಿಆರ್ಎಸ್ ಶಾಸಕ ಪಾಡಿ ಕೌಶಿಕ್ ರೆಡ್ಡಿ ಅವರನ್ನು ತೆಲಂಗಾಣ ಪೊಲೀಸರು ಶನಿವಾರ ನಸುಕಿನಲ್ಲಿ ಬಂಧಿಸಿದ್ದಾರೆ. ಹುಝೂರಾಬಾದ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೌಶಿಕ್ ರೆಡ್ಡಿ ಅವರನ್ನು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು ಆನಂತರ ವಾರಂಗಲ್ಗೆ ಕರೆದೊಯ್ಯಲಾಯಿತು ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.
ಕಲ್ಲುಕೋರೆಯ ಮಾಲಕರೊಬ್ಬರಿಗೆ ಬೆದರಿಕೆಯೊಡ್ಡಿ ಅವರಿಂದ 25 ಲಕ್ಷ ರೂ. ಸುಲಿಗೆ ಮಾಡಿದ್ದರು ಹಾಗೂ ಇನ್ನೂ 50 ಲಕ್ಷ ರೂ. ನೀಡುವಂತೆ ಬೇಡಿಕೆಯೊಡ್ಡಿದ್ದರೆಂಬ ಆರೋಪಕ್ಕೆ ಸಂಬಂಧಿಸಿ ಕೌಶಿಕ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ಕೌಶಿಕ್ ರೆಡ್ಡಿ ವಿರುದ್ಧದ ಆರೋಪವನ್ನು ಭಾರತೀಯ ರಾಷ್ಟ್ರೀಯ ಸಮಿತಿ (ಬಿಆರ್ಎಸ್) ತಳ್ಳಿ ಹಾಕಿದೆ. ಮುಖ್ಯಮಂತ್ರಿ, ಸಚಿವರು ಹಾಗೂ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನಾಯಕರ ಅವ್ಯವಹಾರಗಳನ್ನು ಪ್ರಶ್ನಿಸಿದ್ದಕ್ಕಾಗಿ ಕೌಶಿಕ್ ರೆಡ್ಡಿ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅದು ಆಪಾದಿಸಿದೆ.





