Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಮ್ಮನ್ನು ಲಘುವಾಗಿ ಪರಿಗಣಿಸಲು...

ನಮ್ಮನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ದಿಲ್ಲಿ ಸರಕಾರದ ವಿರುದ್ಧ ಕಿಡಿಕಾರಿದ ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ21 Nov 2023 5:16 PM IST
share
ನಮ್ಮನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ದಿಲ್ಲಿ ಸರಕಾರದ ವಿರುದ್ಧ ಕಿಡಿಕಾರಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಪ್ರತಿವರ್ಷ ರಾಷ್ಟ್ರ ರಾಜಧಾನಿಯನ್ನು ಕಾಡುತ್ತಿರುವ ವಾಯುಮಾಲಿನ್ಯದ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಗಳ ಮ್ಯಾರಥಾನ್ ವಿಚಾರಣೆಯನ್ನು ನಡೆಸುತ್ತಿರುವ ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ದಿಲ್ಲಿ ಮತ್ತು ಪಂಜಾಬ್ ಸರಕಾರಗಳನ್ನು ತೀವ್ರ ತರಾಟೆಗೆತ್ತಿಕೊಂಡಿತು. ದಿಲ್ಲಿಯಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಹದಗೆಡುವಲ್ಲಿ ಮಹತ್ವದ ಪಾತ್ರವನ್ನು ಹೊಂದಿರುವ ಕೃಷಿ ತ್ಯಾಜ್ಯ ಸುಡುವಿಕೆಯ ವಿರುದ್ಧ ಕ್ರಮವನ್ನು ತೆಗೆದುಕೊಳ್ಳುವಂತೆ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಎಸ್.ಧುಲಿಯಾ ಅವರ ಪೀಠವು ದಿಲ್ಲಿ ಮತ್ತು ಪಂಜಾಬಗಳಿಗೆ ಸೂಚಿಸಿತು. ಉಭಯ ರಾಜ್ಯಗಳನ್ನು ಆಪ್ ಆಳುತ್ತಿದೆ.

‘ಇದು ಕಳೆದ ಆರು ವರ್ಷಗಳಲ್ಲಿಯೇ ಅತ್ಯಂತ ಕಲುಷಿತ ನವಂಬರ್ ತಿಂಗಳು ಆಗಿದೆ. ಸಮಸ್ಯೆ ತಿಳಿದಿರುವುದೇ ಆಗಿದೆ ಮತ್ತು ಅದನ್ನು ನಿಯಂತ್ರಿಸುವುದು ನಿಮ್ಮ ಕೆಲಸವಾಗಿದೆ’ಎಂದು ಪೀಠವು ಉಭಯ ರಾಜ್ಯಗಳಿಗೆ ಮತ್ತು ನೆರೆಯ ಬಿಜೆಪಿ ಆಡಳಿತದ ಉತ್ತರ ಪ್ರದೇಶಕ್ಕೆ ತಿಳಿಸಿತು.

ದಿಲ್ಲಿ-ಮೀರತ್ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್‌ಆರ್‌ಟಿಎಸ್)ಗೆ ಹಣಕಾಸು ಒದಗಿಸುವಲ್ಲಿ ವಿಳಂಬಕ್ಕಾಗಿ ದಿಲ್ಲಿ ಸರಕಾರಕ್ಕೆ ಛೀಮಾರಿಯನ್ನೂ ಹಾಕಿದ ನ್ಯಾಯಾಲಯವು,ಜಾಹೀರಾತುಗಳಿಗಾಗಿ ಆಪ್ ವೆಚ್ಚದಿಂದ ಹಣವನ್ನು ವರ್ಗಾಯಿಸುವಂತೆ ಆದೇಶಿಸಿತು.

‘ನೀವು ನಮ್ಮ ಆದೇಶವನ್ನು ಪಾಲಿಸಿಲ್ಲ. ನಮಗೆ ಬೇರೆ ಮಾರ್ಗ ಉಳಿದಿಲ್ಲ. ನೀವು ನಮ್ಮನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ’ ಎಂದು ಸರ್ವೋಚ್ಚ ನ್ಯಾಯಾಲಯವು ಕಟುವಾಗಿ ಹೇಳಿತು.

ಕಳೆದ ಜುಲೈನಲ್ಲಿ, ನಗರವನ್ನು ನೆರೆಯ ರಾಜ್ಯಗಳಿಗೆ ಸಂಪರ್ಕಿಸುವ ಮತ್ತು ವಾಹನ ಸಂಚಾರವನ್ನು ತಗ್ಗಿಸುತ್ತದೆ ಎಂದು ನಿರೀಕ್ಷಿಸಲಾಗಿರುವ ರೈಲು ಜಾಲಕ್ಕೆ ಕೊಡುಗೆ ನೀಡಲು ತನಗೆ ಸಾಧ್ಯವಿಲ್ಲ ಎಂದು ದಿಲ್ಲಿ ಸರಕಾರವು ತಿಳಿಸಿದ ಬಳಿಕ ಸರ್ವೋಚ್ಚ ನ್ಯಾಯಾಲಯವು ಅದಕ್ಕೆ ಛೀಮಾರಿ ಹಾಕಿತ್ತು.

ರೈಲು ಜಾಲ ನಿರ್ಮಾಣಕ್ಕೆ 415 ಕೋಟಿ ರೂ.ಗಳ ಪಾಲನ್ನು ನೀಡಲು ತನ್ನ ಅಸಾಮರ್ಥ್ಯವನ್ನು ದಿಲ್ಲಿ ಸರಕಾರವು ವ್ಯಕ್ತಪಡಿಸಿದ ಬಳಿಕ ಸರ್ವೋಚ್ಚ ನ್ಯಾಯಾಲಯವು,ಕಳೆದ ಮೂರು ವರ್ಷಗಳಲ್ಲಿ ಜಾಹೀರಾತಿಗಾಗಿ ವ್ಯಯಿಸಿರುವ ಮೊತ್ತದ ವಿವರಗಳನ್ನು ತನ್ನ ಮುಂದಿರಿಸುವಂತೆ ಅದಕ್ಕೆ ನಿರ್ದೇಶನ ನೀಡಿತ್ತು.

ದಿಲ್ಲಿ ಸರಕಾರವು ಒಂದು ವಾರದೊಳಗೆ ಆರ್‌ಆರ್‌ಟಿಎಸ್‌ಗೆ ಹಣವನ್ನು ನೀಡದಿದ್ದರೆ ಅದರ ‘ಜಾಹೀರಾತು’ ಹಂಚಿಕೆಗಳಿಂದ ಹಣವನ್ನು ವರ್ಗಾಯಿಸಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯವು ಆಡಳಿತಾರೂಢ ಆಪ್‌ಗೆ ಎಚ್ಚರಿಕೆಯನ್ನು ನೀಡಿತು.

ಕೃಷಿ ತ್ಯಾಜ್ಯಗಳನ್ನು ಸುಡುತ್ತಿರುವುದಕ್ಕಾಗಿ ಮತ್ತೆ ತೀವ್ರ ನಿಗಾದಲ್ಲಿರುವ ಪಂಜಾಬಿನ ರೈತರ ಸ್ಥಿತಿಯ ಬಗ್ಗೆ ಸಹಾನುಭೂತಿಯನ್ನು ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲಯವು,ರೈತನನ್ನು ಖಳನಾಯಕನನ್ನಾಗಿ ಮಾಡಲಾಗುತ್ತಿದೆ ಮತ್ತು ಅವನ ಮಾತನ್ನು ಯಾರೂ ಕೇಳುತ್ತಿಲ್ಲ. ಕೃಷಿ ತ್ಯಾಜ್ಯವನ್ನು ಸುಡಲು ಏನಾದರೂ ಕಾರಣವಿರಲೇಬೇಕು ಎಂದು ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X