2000 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ

ಅನಿಲ್ ಅಂಬಾನಿ (Photo: PTI)
ರಿಲಯನ್ಸ್ ಕಮ್ಯುನಿಕೇಷನ್ಸ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಸಿಬಿಐ
ಮುಂಬೈ : 2000 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಕಮ್ಯುನಿಕೇಷನ್ಸ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು ಅನಿಲ್ ಅಂಬಾನಿ ಅವರ ಮುಂಬೈನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಮುಂಬೈನಲ್ಲಿರುವ ಅಂಬಾನಿ ಅವರ ನಿವಾಸಕ್ಕೆ ಏಳರಿಂದ ಎಂಟು ಅಧಿಕಾರಿಗಳು ಶನಿವಾರ ಬೆಳಿಗ್ಗೆ ತೆರಳಿ ಶೋಧ ಕಾರ್ಯ ನಡೆಸಿರುವ ಬಗ್ಗೆ ವರದಿಯಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ)ಗೆ ವಂಚನೆ ಆರೋಪದ ಮೇಲೆ ಅನಿಲ್ ಅಂಬಾನಿ, ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಇತರರ ವಿರುದ್ಧ ದಿಲ್ಲಿಯಲ್ಲಿ ಎಫ್ಐಆರ್ ದಾಖಲಾಗಿದೆ.
Next Story





