ಕರೂರು ಕಾಲ್ತುಳಿತ ಪ್ರಕರಣ: ಟಿವಿಕೆ ಮುಖ್ಯಸ್ಥ ವಿಜಯ್ಗೆ ಸಿಬಿಐ ಸಮನ್ಸ್

ಟಿವಿಕೆ ಮುಖ್ಯಸ್ಥ ವಿಜಯ್ (Photo: PTI)
ಹೊಸದಿಲ್ಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ಜನವರಿ 12ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಸೆಪ್ಟೆಂಬರ್ 27 ರಂದು ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷದ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿದಲ್ಲಿ 41 ಜನರು ಮೃತಪಟ್ಟಿದ್ದರು ಮತ್ತು 60 ಜನರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿ ಸಿಬಿಐ ತನಿಖೆಗೆ ಆದೇಶಿಸಲಾಗಿತ್ತು.
ಈ ಪ್ರಕರಣದ ತನಿಖೆಯ ಭಾಗವಾಗಿ ಈಗಾಗಲೇ ಟಿವಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್, ಜಂಟಿ ಕಾರ್ಯದರ್ಶಿ ನಿರ್ಮಲ್ ಕುಮಾರ್, ಅಧವ್ ಅರ್ಜುನ್ ಮತ್ತು ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಳಗನ್ ಅವರು ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
Next Story





