Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಹಕಾರಿ ಕ್ಷೇತ್ರದಲ್ಲಿ ರಾಜ್ಯ ಸರಕಾರಗಳ...

ಸಹಕಾರಿ ಕ್ಷೇತ್ರದಲ್ಲಿ ರಾಜ್ಯ ಸರಕಾರಗಳ ಮೇಲೆ ಕೇಂದ್ರದ ಸವಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 Jan 2024 8:57 PM IST
share
ಸಹಕಾರಿ ಕ್ಷೇತ್ರದಲ್ಲಿ ರಾಜ್ಯ ಸರಕಾರಗಳ ಮೇಲೆ ಕೇಂದ್ರದ ಸವಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಾರಾಷ್ಟ್ರ(ಸಂಗಮನೇರ್): ಸಹಕಾರಿ ಕ್ಷೇತ್ರದಲ್ಲಿ ರಾಜ್ಯ ಸರಕಾರಗಳ ಮೇಲೆ ಕೇಂದ್ರ ಸರಕಾರ ಸವಾರಿ ಮಾಡಲು ಹೊರಟಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರವಿವಾರ ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವು ಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ.ಅಣ್ಣಾ ಸಾಹೇಬ್ ಶಿಂಧೆ ಜನ್ಮ ಶತಮಾನೋತ್ಸವ ಕಾರ್ಯಕ್ರಮಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಬರುತ್ತದೆ. ಆದರೆ ಕೇಂದ್ರ ಸರಕಾರ ಸಹಕಾರ ಕ್ಷೇತ್ರದಲ್ಲಿಯೂ ಹಿಡಿತವನ್ನು ಸಾಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಕಾರ ಸಚಿವರಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯಗಳ ಅಧಿಕಾರವನ್ನು ಒತ್ತುವರಿ ಮಾಡಿಕೊಳ್ಳುವ ಕೆಲಸ ಯಾರಿಂದಲೂ ಆಗಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರಕಾರ ಸಹಕಾರಿ ತತ್ವ ಹಾಗೂ ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿದೆ ಎಂದು ಅರ್ಥಮಾಡಿಕೊಳ್ಳಬೇಕು. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ವಿರೋಧಿಸುವುದು ಅಗತ್ಯ ಮತ್ತು ಅನಿವಾರ್ಯ ಎಂದು ಅವರು ಪ್ರತಿಪಾದಿಸಿದರು.

ರಾಜ್ಯದ ಹಿತಕ್ಕೆ ವಿರುದ್ಧ: ಕೇಂದ್ರ ಸರಕಾರವು ಎಪಿಎಂಸಿ ಕಾಯ್ದೆ ಹಾಗೂ ಕೃಷಿ ಕಾಯ್ದೆಗಳನ್ನು ತಿದ್ದುಪಡಿ ಮಾಡಿತು. ರೈತರು ಇದನ್ನು ವಿರೋಧಕ್ಕೆ ಮಣಿದು ಕಾಯ್ದೆ ವಾಪಸ್ಸು ಪಡೆಯುವ ತೀರ್ಮಾನ ಮಾಡಿದರು. ಕೇಂದ್ರದ ಅನೇಕ ತೀರ್ಮಾನಗಳು ರಾಜ್ಯ ಸರಕಾರದ ಹಿತಕ್ಕೆ ವಿರುದ್ಧವಾಗಿವೆ. ಸಹಕಾರ ತತ್ವವಾದ ‘ಒಬ್ಬರಿಗೆ ಎಲ್ಲರೂ, ಎಲ್ಲರಿಗೆ ಒಬ್ಬರು' ಎಂಬ ಉದಾತ್ತ ಧ್ಯೇಯವನ್ನು ನಾಶ ಮಾಡಲು ಕೇಂದ್ರ ಸರಕಾರ ಹೊರಟಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಡಾ.ಅಣ್ಣಾಸಾಹೇಬ್ ಶಿಂಧೆ ದೇಶದ ಆಹಾರದ ಸ್ವಾವಲಂಬನೆಗೆ ಕಾರಣರಾದವರು. ಜವಾಹರ್ ಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ಅಣ್ಣಾಸಾಹೇಬ್ ಶಿಂಧೆಯವರು ಹಸಿರು ಕ್ರಾಂತಿಗೆ ಕಾರಣೀಭೂತರು. ಕೃಷಿ ತಜ್ಞ ಡಾ.ಸ್ವಾಮಿನಾಥನ್ ತಮ್ಮ ಲೇಖನದಲ್ಲಿ ಅಣ್ಣಾ ಸಾಹೇಬ್ ಶಿಂಧೆ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ ಎಂದು ಅವರು ಹೇಳಿದರು.

ದೇಶದಲ್ಲಿ 140 ಕೋಟಿ ಜನರಿಗೆ ಆಹಾರದಲ್ಲಿ ಸ್ವಾವಲಂಬನೆ ಹೊಂದಲು ಕಾಂಗ್ರೆಸ್ ಪಕ್ಷ ಕಾರಣ. ಸಾಹೇಬ್ ಥೋರಟ್ ಹಾಗೂ ಡಾ.ಅಣ್ಣಾಸಾಹೇಬ್ ಶಿಂಧೆ ರವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಬೇಕಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸಂಗಮನೇರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನೇಕ ಸಹಕಾರ ಸಂಘ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದರು. ಸಹಕಾರ ಕ್ಷೇತ್ರ ನಮ್ಮ ದೇಶದಲ್ಲಿ ನೂರು ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿದೆ. ಭಾವು ಸಾಹೇಬ್ ಥೋರಟ್ ಮಹಾತ್ಮ ಗಾಂಧಿಯವರಿಂದ ಸ್ವಾತಂತ್ರ್ಯ ಹೋರಾಟದ ಪ್ರೇರಣೆ ಪಡೆದು ಜೈಲುವಾಸವನ್ನೂ ಅನುಭವಿಸಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾ ಸಾಹೇಬ್ ಥೋರಟ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಚನ್ನಿತಾಲ, ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X