ಆಗಸ್ಟ್ 23 ರಾಷ್ಟ್ರೀಯ ಬಾಹ್ಯಾಕಾಶ ದಿನ: ಕೇಂದ್ರದಿಂದ ಅಧಿಸೂಚನೆ ಪ್ರಕಟ

Photo: X \ @isro
ಹೊಸದಿಲ್ಲಿ: ಚಂದ್ರಯಾನ-3ರ ಅದ್ಬುತ ಯಶಸ್ಸಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲು ಅಧಿಸೂಚನೆಯನ್ನು ಹೊರಡಿಸಿದೆ.
ಚಂದ್ರಯಾನ-3ರಲ್ಲಿ ಆಗಸ್ಟ್ 23ರಂದು ಲ್ಯಾಂಡರ್ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾದ ಇಳಿದಿದ್ದು, ಆ ದಿನವನ್ನೇ ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲು ಕಳೆದ ಆಗಸ್ಟ್ನಲ್ಲಿ ಕೇಂದ್ರ ಸರಕಾರ ನಿರ್ಧರಿಸಿತ್ತು.
ಆಗಸ್ಟ್ 26ರಂದು ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಕಮಾಂಡ್ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆಗಸ್ಟ್ 23 ಅನ್ನು ಬಾಹ್ಯಾಕಾಶ ದಿನವಾಗಿ ಆಚರಿಸಲಾಗುವುದೆಂದು ಘೋಷಿಸಿದ್ದರು.
‘‘ ಇಂದಿನ ಯುಗದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ದೇಶವು ಇತಿಹಾಸವನ್ನು ರೂಪಿಸುತ್ತದೆ. ವಿಜ್ಞಾನ ಹಾಗೂ ತಂತ್ರಜ್ಞಾನ ಹಾಗೂ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ನಮ್ಮ ಯುವತಲೆಮಾರು ಒಳಗೊಳ್ಳುವುದನ್ನು ಉತ್ತೇಜಿಸುವುದಕ್ಕಾಗಿ ಚಂದ್ರಯಾನ 3 ಲ್ಯಾಂಡರ್ ನೌಕೆಯು ಚಂದ್ರನ ನೆಲವನನು ಸ್ಪರ್ಶಿಸಿದ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲು ನಾವು ನಿರ್ಧರಿಸಿದ್ದೇವೆ’’ಎಂದು ಪ್ರಧಾನಿ ಹೇಳಿದ್ದಾರೆ.





