ತಮಿಳುನಾಡು ಸಿಎಂ ಸ್ಟಾಲಿನ್, ನಟಿ ತ್ರಿಷಾ ನಿವಾಸಕ್ಕೆ ಬಾಂಬ್ ಬೆದರಿಕೆ : ಅಧಿಕಾರಿಗಳಿಂದ ಪರಿಶೀಲನೆ

Photo | PTI
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನಿವಾಸ, ನಟಿ ತ್ರಿಷಾ ಅವರ ಮನೆ ಮತ್ತು ರಾಜ್ಯಪಾಲರ ಅಧಿಕೃತ ನಿವಾಸಕ್ಕೆ ಶುಕ್ರವಾರ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ವರದಿಯಾಗಿದೆ.
ಬೆದರಿಕೆ ಹಿನ್ನೆಲೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಆದ್ದರಿಂದ ಹುಸಿ ಬಾಂಬ್ ಕರೆ ಎಂದು ಪರಿಗಣಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಎಂ ಸ್ಟಾಲಿನ್ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆ ಚೆನ್ನೈನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
Next Story





