‘ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2023’ ಇಂದೋರ್, ಸೂರತ್ ಸ್ವಚ್ಛ ನಗರ
Photo: PTI
ಹೊಸದಿಲ್ಲಿ : ಕೇಂದ್ರ ಸರಕಾರದ ‘ವಾರ್ಷಿಕ ಸ್ವಚ್ಛತಾ ಸರ್ವೇಕ್ಷಣೆ’ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಇಂದೋರ್ ಹಾಗೂ ಸೂರತ್ ದೇಶದ ಸ್ವಚ್ಛ ನಗರಗಳಾಗಿ ಗುರುತಿಸಲ್ಪಟ್ಟಿವೆ. ನವಿ ಮುಂಬೈ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ.
‘ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2023’ರಲ್ಲಿ ಉತ್ತಮ ಪ್ರದರ್ಶನ ತೋರಿದ ರಾಜ್ಯಗಳ ವಿಭಾಗದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನವನ್ನು ಪಡೆದಿದ್ದರೆ, ಮಧ್ಯಪ್ರದೇಶ ಹಾಗೂ ಚತ್ತೀಸ್ ಗಢ ಅನಂತರದ ಸ್ಥಾನಗಳನ್ನು ಪಡೆದುಕೊಂಡಿವೆ.
ಇಂದೋರ್ ಸತತ ಏಳನೇ ಬಾರಿ ಸ್ವಚ್ಚ ನಗರ ಎಂಬ ಗೌರವಕ್ಕೆ ಪಾತ್ರವಾಗಿದೆ. ದಿಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕೇಂದ್ರ ಗೃಹ ಹಾಗೂ ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಇತರರು ಪಾಲ್ಗೊಂಡಿದ್ದರು.
Next Story