ಕೊಕೇನ್ ಖರೀದಿ ಪ್ರಕರಣ | ತಮಿಳು ನಟರಾದ ಶ್ರೀಕಾಂತ್, ಕೃಷ್ಣ ಕುಮಾರ್ಗೆ ಈಡಿ ಸಮನ್ಸ್

ಸಾಂದರ್ಭಿಕ ಚಿತ್ರ | Photo Credit : PTI
ಹೊಸದಿಲ್ಲಿ, ಅ. 24: ಕೊಕೇನ್ ಖರೀದಿಸಿದ ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ವಾರದ ಆರಂಭದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯ(ಈಡಿ) ತಮಿಳು ನಟರಾದ ಕೆ. ಶ್ರೀಕಾಂತ್, ಕೃಷ್ಣ ಕುಮಾರ್ಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಸೋಮವಾರ ಹಾಗೂ ಮಂಗಳವಾರದ ಒಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಚೆನ್ನೈ ವಲಯ ಕಚೇರಿ ಇಬ್ಬರೂ ನಟರಿಗೆ ಸಮನ್ಸ್ ಜಾರಿ ಮಾಡಿದೆ.
ಚೆನ್ನೈಯಲ್ಲಿ ಇತ್ತೀಚೆಗೆ ಕೊಕೈನ್ ವಶಪಡಿಸಿಕೊಂಡಿರುವುದಕ್ಕೆ ಸಂಬಂಧಿಸಿದ ಮಾದಕ ವಸ್ತು ಸಾಗಾಟ ಜಾಲ ಹಾಗೂ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯ ಭಾಗವಾಗಿ ಈ ಸಮನ್ಸ್ ಜಾರಿ ಮಾಡಲಾಗಿದೆ.
ಎನ್ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಗ್ರೇಟರ್ ಚೆನ್ನೈನಗರ ಪೊಲೀಸರು ದಾಖಲಿಸಿದ ಪ್ರಕರಣದಲ್ಲಿ ಶ್ರೀಕಾಂತ್ (45) ಹಾಗೂ ಕುಮಾರ್ (47)ಗೆ ಮದ್ರಾಸ್ ಉಚ್ಚ ನ್ಯಾಯಾಲಯ 2025ರ ಜುಲೈ 8ರಂದು ಜಾಮೀನು ಮಂಜೂರು ಮಾಡಿತ್ತು.
Next Story





