ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ಪರಿಷ್ಕರಿಸಿದ್ದು, ಇಂದಿನಿಂದ ರೂ.30 ಅಗ್ಗವಾಗಿದೆ.
ಇಂದಿನಿಂದ ದಿಲ್ಲಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆ ರೂ. 1646 ಆಗಲಿದೆ. ಮುಂಬೈನಲ್ಲಿ ರೂ. 1,687 ಇರಲಿದೆ.
ಆದರೆ, ಅಡುಗೆ ಅನಿಲ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ರೂ. 803ರಲ್ಲೇ ಮುಂದುವರಿದಿದೆ. ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿಯೂ ಯಾವುದೇ ಬದಲಾವಣೆಯಾಗಿಲ್ಲ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ದರ ಹಾಗೂ ವಿದೇಶಿ ವಿನಿಮಯ ಮೌಲ್ಯವನ್ನು ಆಧರಿಸಿ ಸರಕಾರಿ ತೈಲ ಕಂಪನಿಗಳು ಪ್ರತಿ ದಿನ ತೈಲ ದರ ಪರಿಷ್ಕರಣೆ ಮಾಡುತ್ತವೆ.
Next Story





