Uttar Pradesh: ದಲಿತ ಬಾಲಕಿಯ ಮೇಲೆ ಅತ್ಯಾಚಾರ

ಸಾಂದರ್ಭಿಕ ಚಿತ್ರ | Photo Credit : freepik
ಅಮೇಠಿ, ಡಿ.31: ಹೊಲಕ್ಕೆ ತೆರಳಿದ್ದ 13 ವರ್ಷದ ದಲಿತ ಬಾಲಕಿಯ ಮೇಲೆ ದುಷ್ಕರ್ಮಿಯೋರ್ವ ಅತ್ಯಾಚಾರ ಎಸಗಿದ ಘಟನೆ ಮಂಗಳವಾರ ಇಲ್ಲಿನ ಫುರಸತಗಂಜ್ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅದೇ ಗ್ರಾಮದ ಯುವಕನೊಬ್ಬ ಬಾಲಕಿಯನ್ನು ತನ್ನ ಕೊಳವೆಬಾವಿಯತ್ತ ಎಳೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದು, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಬಾಲಕಿಯ ತಾಯಿಯ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Next Story





