ಉತ್ತರ ಪ್ರದೇಶ| ಕತ್ತು ಸೀಳಿದ ಸ್ಥಿತಿಯಲ್ಲಿ ದಲಿತ ಯುವಕನ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ
ಸುಲ್ತಾನ್ ಪುರ್: ಕತ್ತು ಸೀಳಿದ ಸ್ಥಿತಿಯಲ್ಲಿ ದಲಿತ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಗುರುವಾರ ಬೆಳಗ್ಗೆ ಉತ್ತರ ಪ್ರದೇಶದ ಸುಲ್ತಾನ್ ಪುರ್ ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಯುವಕನನ್ನು ಕಿಂಡಿಪುರ್ ಗ್ರಾಮದ ನಿವಾಸಿ ಮಹೇಶ್ ಕುಮಾರ್ (35) ಎಂದು ಗುರುತಿಸಲಾಗಿದ್ದು, ಆತ ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ.
ಯುವಕನ ಮೃತದೇಹ ಕಿಂಡಿಪುರ್ ಮಾರುಕಟ್ಟೆಯಲ್ಲಿನ ಮದ್ಯದಂಗಡಿಯ ಹಿಂದೆ ಪತ್ತೆಯಾಗಿದ್ದು, ಈ ಪ್ರದೇಶದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಯುವಕನ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಸೀಳಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ತಂಡವೊಂದನ್ನು ರಚಿಸಲಾಗಿದೆ ಎಂದು ಪೊಲೀಸ್ ವೃತ್ತಾಧಿಕಾರಿ ಅಬ್ದುಸ್ ಸಲಾಂ ತಿಳಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಖಂಡ್ ಪ್ರತಾಪ್ ಸಿಂಗ್ ಕೂಡಾ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯ ಪರಾಮರ್ಶೆ ನಡೆಸಿದರು.





