ದಿಲ್ಲಿ ವಿಧಾನಸಭಾ ಚುನಾವಣೆ | ನಾಮಪತ್ರ ಸಲ್ಲಿಸಿದವರ ಸಂಖ್ಯೆ 841ಕ್ಕೇರಿಕೆ

ಮನೀಶ್ ಸಿಸೋಡಿಯಾ | PC : PTI
ಹೊಸದಿಲ್ಲಿ : ಮುಂಬರುವ ದಿಲ್ಲಿ ವಿಧಾನಸಭಾ ಚುನಾವಣೆಗೆ ಗುರುವಾರದಂದು ಒಟ್ಟು 500 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ದಿಲ್ಲಿ ವಿಧಾನಸಭೆಯ 70 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಸಂಖ್ಯೆ 841ಕ್ಕೇರಿದೆ.
ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಜಂಗ್ಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇತರ ಪ್ರಮುಖ ಆಪ್ ನಾಯಕರಾದ ಗೋಪಾಲ್ ರಾಯ್ ಅವರು ಬಾಬರ್ಪುರದಲ್ಲಿ ಹಾಗೂ ಸೌರಭ್ ಭಾರದ್ವಾಜ್ ಅವರು ಗ್ರೇಟರ್ ಕೈಲಾಶ್ನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರು ಹೊಸದಿಲ್ಲಿ ಕ್ಷೇತ್ರದಿಂದ ನಾಮಪತ್ರವನ್ನು ಸಲ್ಲಿಸುವ ಮೂಲಕ ಚುನಾವಣಾ ಕಣಕ್ಕೆ ಧುಮುಕಿದ್ದು, ಅಲ್ಲಿ ಅವರು ಆಪ್ ವರಿಷ್ಠ ಅರವಿಂದ್ ಕೇಜ್ರಿವಾಲ್ ಅವರನ್ನು ಎದುರಿಸಲಿದ್ದಾರೆ.
Next Story





