ದಿಲ್ಲಿ | 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ; ಸ್ವಯಂಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಬಂಧನ

ಹೊಸದಿಲ್ಲಿ: ದಿಲ್ಲಿಯ ವಸಂತ್ ಕುಂಜ್‌ನಲ್ಲಿರುವ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ಸಂಸ್ಥೆಯ ನಿರ್ದೇಶಕ ಹಾಗೂ ಸ್ವಯಂ ಘೋಷಿತ ‘ದೇವಮಾನವ’ ಸ್ವಾಮಿ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥ ಸಾರಥಿಯನ್ನು ಆಗ್ರಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕಳೆದ 50 ದಿನಗಳಿಂದ ಪರಾರಿಯಾಗಿದ್ದ ಸ್ವಾಮಿಯನ್ನು ತಾಜ್‌ಗಂಜ್ ಪ್ರದೇಶದ ಹೋಟೆಲ್‌ನಲ್ಲಿ ಬೆಳಗಿನ ಜಾವ 3.30ಕ್ಕೆ ಪೊಲೀಸರು ವಶಕ್ಕೆ ಪಡೆದರು.
ಚೈತನ್ಯಾನಂದ ವಿರುದ್ಧ ಸಂಸ್ಥೆಯ 17 ಮಹಿಳಾ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದರು. ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುವುದು, ದೈಹಿಕ ಸಂಪರ್ಕಕ್ಕೆ ಪ್ರಯತ್ನಿಸುವುದು, ಉಚಿತ ವಿದೇಶ ಪ್ರವಾಸಗಳ ಆಮಿಷ ಒಡ್ಡುವುದು ಸೇರಿದಂತೆ ಅನೇಕ ಆರೋಪವಿದೆ. ಮಹಿಳಾ ಹಾಸ್ಟೆಲ್ ನಲ್ಲಿ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿದ್ದರೆಂಬ ಸಂಗತಿ ಕೂಡ ಬೆಳಕಿಗೆ ಬಂದಿದೆ.
ಪ್ರಕರಣ ಬಹಿರಂಗವಾದ ತಕ್ಷಣ ಶೃಂಗೇರಿ ಮಠದ ಆಶ್ರಮದ ಸಂಸ್ಥೆಯ ಆಡಳಿತ ಮಂಡಳಿ ಚೈತನ್ಯಾನಂದನನ್ನು ಹುದ್ದೆಯಿಂದ ವಜಾಗೊಳಿಸಿತ್ತು.
Next Story





