Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರವಿಂದ್ ಕೇಜ್ರಿವಾಲ್ ಗಿಂತ ಅತಿಶಿ ಸಾವಿರ...

ಅರವಿಂದ್ ಕೇಜ್ರಿವಾಲ್ ಗಿಂತ ಅತಿಶಿ ಸಾವಿರ ಪಾಲು ಉತ್ತಮ ಸಿಎಂ ಎಂದು ಶ್ಲಾ ಘಿಸಿದ ದಿಲ್ಲಿ ಲೆಫ್ಟಿನೆಂಟ್ ಗವರ್ನರ್!

ವಾರ್ತಾಭಾರತಿವಾರ್ತಾಭಾರತಿ22 Nov 2024 6:32 PM IST
share
ಅರವಿಂದ್ ಕೇಜ್ರಿವಾಲ್ ಗಿಂತ ಅತಿಶಿ ಸಾವಿರ ಪಾಲು ಉತ್ತಮ ಸಿಎಂ ಎಂದು ಶ್ಲಾ ಘಿಸಿದ ದಿಲ್ಲಿ ಲೆಫ್ಟಿನೆಂಟ್ ಗವರ್ನರ್!

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅತಿಶಿಯನ್ನು ಅಪರೂಪಕ್ಕೆ ಶ್ಲಾ ಘಿಸಿರುವ ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ, “ತಮ್ಮ ನಿಕಟವರ್ತಿ ಅರವಿಂದ್ ಕೇಜ್ರಿವಾಲ್ ಗಿಂತ ಅತಿಶಿ ಸಾವಿರ ಪಾಲು ಉತ್ತಮ ಮುಖ್ಯಮಂತ್ರಿ” ಎಂದು ಶುಕ್ರವಾರ ಹೇಳಿದರು.

ಇಲ್ಲಿ ನಡೆದ ಇಂದಿರಾ ಗಾಂಧಿ ದಿಲ್ಲಿ ಮಹಿಳಾ ತಾಂತ್ರಿಕ ವಿಶ್ವವಿದ್ಯಾಲಯದ ಏಳನೆ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಕ್ಸೇನಾ, “ಈಗಿನ ದಿಲ್ಲಿ ಮುಖ್ಯಮಂತ್ರಿ ಅತಿಶಿ ಓರ್ವ ಮಹಿಳೆ ಎಂಬ ಕುರಿತು ನನಗೆ ಸಂತಸವಾಗಿದ್ದು, ಅವರು ತಮ್ಮ ನಿಕಟವರ್ತಿಗಿಂತ ಸಾವಿರ ಪಾಲು ಉತ್ತಮ ಮುಖ್ಯಮಂತ್ರಿಯಾಗಿದ್ದಾರೆ” ಎಂದು ಪ್ರಶಂಸಿಸಿದರು.

ಘಟಿಕೋತ್ಸವದಲ್ಲಿ ಉಪಸ್ಥಿತರಿದ್ದ ಅತಿಶಿಯತ್ತ ಒಮ್ಮೆ ಕಣ್ಣು ಹಾಯಿಸಿ ಅವರು ಈ ಹೇಳಿಕೆ ನೀಡಿದರು.

ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಸಕ್ಸೇನಾ, “ನೀವು ಮುಂದುವರಿದಂತೆ, ನಿಮ್ಮನ್ನು ಮುನ್ನಡೆಸುವ ನಾಲ್ಕು ಮಾರ್ಗದರ್ಶಿ ಸೂತ್ರಗಳಿರುತ್ತವೆ. ಮೊದಲನೆಯದು, ನಿಮ್ಮ ಕಡೆಗಿನ ನಿಮ್ಮ ಜವಾಬ್ದಾರಿ, ಎರಡನೆಯದು, ನಿಮ್ಮ ಪೋಷಕರು ಹಾಗೂ ಕುಟುಂಬ, ಮೂರನೆಯದು, ಸಮಾಜ ಮತ್ತು ರಾಷ್ಟ್ರ ನಿರ್ಮಾಣದೆಡೆಗಿನ ಹೊಣೆಗಾರಿಕೆ. ಲಿಂಗ ತಾರತಮ್ಯದ ಗೋಡೆಯನ್ನು ಒಡೆದು ಹಾಕಿ, ಎಲ್ಲ ಕ್ಷೇತ್ರಗಳಲ್ಲೂ ಇನ್ನಿತರರೊಂದಿಗೆ ಸಮನಾಗಿ ನಿಲ್ಲುವ ಮಹಿಳೆಯಾಗುವುದು ನಿಮ್ಮ ನಾಲ್ಕನೆ ಜವಾಬ್ದಾರಿ” ಎಂದು ಕಿವಿಮಾತು ಹೇಳಿದರು.

ಸೆಪ್ಟೆಂಬರ್ ತಿಂಗಳಲ್ಲಿ ಕೇಜ್ರಿವಾಲ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಂತರ, ಆಡಳಿತ ಮತ್ತು ಅಧಿಕಾರಶಾಹಿಯ ನಿಯಂತ್ರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಆಪ್ ಮತ್ತು ಬಿಜೆಪಿ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದೆ.

ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ, ಸಾರ್ವಜನಿಕರಿಂದ ನಾನು ಪ್ರಾಮಾಣಿಕತೆಯ ಪ್ರಮಾಣ ಪತ್ರ ಪಡೆಯಲು ಬಯಸುತ್ತೇನೆ ಎಂದು ರಾಜೀನಾಮೆ ಸಲ್ಲಿಕೆಯ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X