Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾದಿಂದ ಹಣ, 2019ರ ಚುನಾವಣೆಯನ್ನು...

ಚೀನಾದಿಂದ ಹಣ, 2019ರ ಚುನಾವಣೆಯನ್ನು ಬಡಮೇಲುಗೊಳಿಸಲು ಸಂಚು: ನ್ಯೂಸ್‌ ಕ್ಲಿಕ್‌ ವಿರುದ್ಧ ಪೋಲಿಸರ ಎಫ್ಐಆರ್ ನಲ್ಲಿ ಏನೇನಿದೆ?

ವಾರ್ತಾಭಾರತಿವಾರ್ತಾಭಾರತಿ6 Oct 2023 10:49 PM IST
share
ಚೀನಾದಿಂದ ಹಣ, 2019ರ ಚುನಾವಣೆಯನ್ನು ಬಡಮೇಲುಗೊಳಿಸಲು ಸಂಚು: ನ್ಯೂಸ್‌ ಕ್ಲಿಕ್‌ ವಿರುದ್ಧ ಪೋಲಿಸರ ಎಫ್ಐಆರ್ ನಲ್ಲಿ ಏನೇನಿದೆ?

ಹೊಸದಿಲ್ಲಿ : ಚೀನಿ ಸಂಸ್ಥೆಗಳೊಂದಿಗೆ ನಂಟಿನ ಆರೋಪದಲ್ಲಿ ತನಿಖೆಗೊಳಪಟ್ಟಿರುವ ಸುದ್ದಿ ಜಾಲತಾಣ ನ್ಯೂಸ್‌ ಕ್ಲಿಕ್‌ ಭಾರತದ ಏಕತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ದುರ್ಬಲಗೊಳಿಸುತ್ತಿದೆ ಎಂದು ದಿಲ್ಲಿ ಪೊಲೀಸರು ಆರೋಪಿಸಿದ್ದಾರೆ. ಪೋಲಿಸರು ದಾಖಲಿಸಿರುವ ಎಫ್ಐಆರ್ ಪ್ರಕಾರ ಚೀನಾದಿಂದ ಬೃಹತ್ ಮೊತ್ತದ ಹಣ ಬಂದಿತ್ತು ಮತ್ತು ಪಾವತಿ ಸುದ್ದಿಗಳನ್ನು ಉದ್ದೇಶಪೂರ್ವಕವಾಗಿ ಪ್ರಚಾರ ಮಾಡಲಾಗುತ್ತಿತ್ತು.

ಎಫ್ ಐ ಆರ್ ನಲ್ಲಿ ನ್ಯೂಸ್ ಕ್ಲಿಕ್, ಅದರ ಸ್ಥಾಪಕ ಪ್ರಬೀರ ಪುರಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ, ಜೊತೆಗೆ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರನ್ನು ಹೆಸರಿಸಲಾಗಿದೆ ಮತ್ತು ಭಾರತದ ವಿರುದ್ಧ ಅಸಂತೋಷವನ್ನುಂಟು ಮಾಡಲು ಹಾಗೂ ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಅಪಾಯವೊಡ್ಡಲು ಪ್ರಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ಪುರಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.

ಭಾರತದ ಸಾರ್ವಭೌಮತೆಗೆ ಅಡ್ಡಿಯನ್ನುಂಟು ಮಾಡಲು ಮತ್ತು ಭಾರತದ ವಿರುದ್ಧ ಅಸಂತೋಷವನ್ನು ಹುಟ್ಟುಹಾಕಲು ಸಂಚಿನ ಮುಂದುವರಿದ ಭಾಗವಾಗಿ ಚೀನಾದಿಂದ ದೊಡ್ಡ ಪ್ರಮಾಣದಲ್ಲಿ ಹಣವನ್ನು ಬಳಸು ಮಾರ್ಗದಿಂದ ಮತ್ತು ರಹಸ್ಯವಾಗಿ ರವಾನಿಸಲಾಗಿತ್ತು. ದೇಶಿಯ ನೀತಿಗಳು ಮತ್ತು ಭಾರತದ ಅಭಿವೃದ್ಧಿ ಯೋಜನೆಗಳನ್ನು ಟೀಕಿಸುವ ಹಾಗೂ ಚೀನಿ ಸರಕಾರದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಉತ್ತೇಜಿಸುವ, ಪ್ರವರ್ತಿಸುವ ಮತ್ತು ಸಮರ್ಥಿಸುವ ಪಾವತಿ ಸುದ್ದಿಗಳನ್ನು ಉದ್ದೇಶಪೂರ್ವಕವಾಗಿ ಪ್ರಚಾರ ಮಾಡಲಾಗುತ್ತಿತ್ತು ಎಂದು ಎಫ್ ಐ ಆರ್ ನಲ್ಲಿ ಹೇಳಲಾಗಿದೆ.

ಚೀನಿ ಸರಕಾರದ ಮಾಧ್ಯಮ ಯಂತ್ರದೊಂದಿಗೆ ನಿಕಟ ಸಂಬಂಧಗಳನ್ನು ಹೊಂದಿದ್ದಾರೆ ಎಂದು ನಂಬಲಾಗಿರುವ ಅಮೆರಿಕದ ಬಿಲಿಯಾಧೀಶ ನೆವಿಲ್ಲೆ ಸಿಂಘಂ ಅವರಿಂದ ಕಪಟ ಮಾರ್ಗದಿಂದ ವಿದೇಶಿ ನಿಧಿಗಳನ್ನು ಹರಿಸಲಾಗಿತ್ತು ಎಂದು ಎಫ್ಐಆರ್ ಪ್ರತಿಪಾದಿಸಿದೆ.

ಎಫ್ಐಆರ್ ಪ್ರಕಾರ ಚೀನಾದ ಬೃಹತ್ ಟೆಲಿಕಾಂ ಉದ್ಯಮಿಗಳೂ ಭಾರತದಲ್ಲಿ ಸಾವಿರಾರು ಮುಖವಾಡ ಕಂಪನಿಗಳನ್ನು ಹುಟ್ಟುಹಾಕಿದ್ದಾರೆ.

2019ರ ಲೋಕಸಭಾ ಚುನಾವಣೆಯ ಪ್ರಕ್ರಿಯೆಗಳನ್ನು ಹಾಳುಗೆಡವಲು ಪುರಕಾಯಸ್ಥ ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಆ್ಯಂಡ್ ಸೆಕ್ಯುಲರಿಸಂ (ಪಿಎಡಿಎಸ್) ಗುಂಪಿನ ಜೊತೆಗೆ ಸಂಚು ರೂಪಿಸಿದ್ದರು ಎಂದೂ ದಿಲ್ಲಿ ಪೊಲೀಸರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X