ದಿಲ್ಲಿಯ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ; ಪೊಲೀಸರಿಂದ ತೀವ್ರ ಶೋಧ

Photo: X/PTI
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯ ಹಲವು ಶಾಲೆಗಳಿಗೆ ಶನಿವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ದ್ವಾರಕಾದಲ್ಲಿರುವ ದಿಲ್ಲಿ ಪಬ್ಲಿಕ್ ಸ್ಕೂಲ್ (ಡಿಪಿಎಸ್), ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್ ಮತ್ತು ಸರ್ವೋದಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಕರೆಗಳು ಬಂದಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರನ್ನು ಕಳುಹಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ನಾವು ಶಾಲೆಯಲ್ಲಿ ಕೂಲಂಕಷವಾಗಿ ಪರಿಶೀಲಿಸುತ್ತಿದ್ದೇವೆ. ಅನುಮಾನಾಸ್ಪದ ವಸ್ತುಗಳೇನೂ ಪತ್ತೆಯಾಗಿಲ್ಲ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story





