ಏರ್ ಇಂಡಿಯಾ ವಿಮಾನ ದುರಂತ: ಮೃತರ ಗುರುತು ಪತ್ತೆಗೆ ಕುಟುಂಬಸ್ಥರ ಡಿಎನ್ಎ ಸಂಗ್ರಹ

Photo credit: PTI
ಅಹ್ಮದಾಬಾದ್ : ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತರ ಗುರುತು ಪತ್ತೆಗಾಗಿ ಬಿಜೆ ವೈದ್ಯಕೀಯ ಕಾಲೇಜಿನಲ್ಲಿ ಮೃತರ ಕುಟುಂಬಸ್ಥರಿಂದ ಡಿಎನ್ಎ ಮಾದರಿ ಸಂಗ್ರಹಿಸಲಾಗುತ್ತಿದೆ.
ಮೃತದೇಹವನ್ನು ಡಿಎನ್ಎ ಪರೀಕ್ಷೆ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಬಿಜೆ ವೈದ್ಯಕೀಯ ಕಾಲೇಜಿನ ನೆಲ ಮಹಡಿಯಲ್ಲಿರುವ ಪಿಎಸ್ಎಂ ವಿಭಾಗದ ಬಳಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರದಲ್ಲಿ ಡಿಎನ್ಎ ಮಾದರಿಗಳನ್ನು ಸಂಗ್ರಹಿಸುವ ಪ್ರಕ್ರಿಯೆಯು ನಡೆಯುತ್ತಿದೆ. ಬಳಿಕ ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ. ಸಂಪೂರ್ಣ ಡಿಎನ್ಎ ಹೊಂದಾಣಿಕೆ ಪ್ರಕ್ರಿಯೆಯು ಕನಿಷ್ಠ ಮೂರು ದಿನಗಳು ಅಥವಾ ಅದಕ್ಕಿಂತ ಹೆಚ್ಚು ದಿನಗಳು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
Next Story





