Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಾದ್ಯಂತ 334 ಪಕ್ಷಗಳನ್ನು ಕೈಬಿಟ್ಟ...

ದೇಶದಾದ್ಯಂತ 334 ಪಕ್ಷಗಳನ್ನು ಕೈಬಿಟ್ಟ ಚುನಾವಣಾ ಆಯೋಗ; ಕರ್ನಾಟಕದ 12 ಪಕ್ಷಗಳೂ ಪಟ್ಟಿಯಲ್ಲಿ

ವಾರ್ತಾಭಾರತಿವಾರ್ತಾಭಾರತಿ10 Aug 2025 2:07 PM IST
share
ದೇಶದಾದ್ಯಂತ 334 ಪಕ್ಷಗಳನ್ನು ಕೈಬಿಟ್ಟ ಚುನಾವಣಾ ಆಯೋಗ; ಕರ್ನಾಟಕದ 12 ಪಕ್ಷಗಳೂ ಪಟ್ಟಿಯಲ್ಲಿ

ಹೊಸದಿಲ್ಲಿ: ದೇಶದಾದ್ಯಂತ ನಿಷ್ಕ್ರಿಯವಾಗಿದ್ದ 334 ನೋಂದಾಯಿತ, ಆದರೆ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಚುನಾವಣಾ ಆಯೋಗ ಶನಿವಾರ ತನ್ನ ಪಟ್ಟಿಯಿಂದ ಕೈಬಿಟ್ಟಿದೆ. ಈ ಪಟ್ಟಿಯಲ್ಲಿ ಕರ್ನಾಟಕದ 12 ಪಕ್ಷಗಳೂ ಸೇರಿವೆ.

ಚುನಾವಣಾ ಆಯೋಗದ ಪ್ರಕಾರ, 2019ರಿಂದ ಕಳೆದ ಆರು ವರ್ಷಗಳಲ್ಲಿ ಈ ಪಕ್ಷಗಳು ಒಂದೇ ಒಂದು ಚುನಾವಣೆಯಲ್ಲೂ ಸ್ಪರ್ಧಿಸಿಲ್ಲ. ಜೊತೆಗೆ, ನೋಂದಾಯಿತ ವಿಳಾಸದಲ್ಲೂ ಅವುಗಳ ಕಚೇರಿ ಪತ್ತೆಯಾಗದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಈ ಪಟ್ಟಿಯಲ್ಲಿ ಕರ್ನಾಟಕದ 12 ಪಕ್ಷಗಳೂ ಇವೆ. ಅಂಬೇಡ್ಕರ್‌ ಜನತಾ ಪಕ್ಷ, ಭಾರತೀಯ ಪ್ರಜಾ ಪಕ್ಷ, ಜನ ಸ್ವರಾಜ್ಯ ಪಕ್ಷ, ಕಲ್ಯಾಣ ಕ್ರಾಂತಿ ಪಕ್ಷ, ಕರ್ನಾಟಕ ಪ್ರಜಾ ವಿಕಾಸ್‌ ಪಕ್ಷ, ಕರ್ನಾಟಕ ಸ್ವರಾಜ್ಯ ಪಕ್ಷ, ಮಹಿಳಾ ಪ್ರಧಾನ ಪಕ್ಷ, ನಮ್ಮ ಕಾಂಗ್ರೆಸ್‌, ಪ್ರಜಾ ರೈತ ರಾಜ್ಯ ಪಕ್ಷ, ರಕ್ಷಕ ಸೇನಾ, ಸಮನ್ಯಾ ಜನತಾ ಪಕ್ಷ (ಲೋಕ ತಾಂತ್ರಿಕ್‌), ವಿಚಾರ ಜಾಗೃತಿ ಕಾಂಗ್ರೆಸ್‌ ಪಕ್ಷ ಚುನಾವಣಾ ಆಯೋಗ ಕೈಬಿಟ್ಟ ಕರ್ನಾಟಕದ ಪಕ್ಷಗಳು.

ಬಿಹಾರದಲ್ಲಿ 17 ಪಕ್ಷಗಳು, ಉತ್ತರ ಪ್ರದೇಶದಲ್ಲಿ 115, ದಿಲ್ಲಿಯಲ್ಲಿ 27, ತಮಿಳುನಾಡಿನಲ್ಲಿ 22, ಹರ್ಯಾ ದಲ್ಲಿ 21, ಮಧ್ಯಪ್ರದೇಶದಲ್ಲಿ 15, ತೆಲಂಗಾಣದಲ್ಲಿ 13 ಹಾಗೂ ಗುಜರಾತ್‌ ನಲ್ಲಿ 11 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.

ಈ ಕ್ರಮದ ನಂತರ ದೇಶದಲ್ಲಿ ಅಸ್ತಿತ್ವದಲ್ಲಿದ್ದ 2,854 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಪೈಕಿ 2,520 ಪಕ್ಷಗಳು ಮಾತ್ರ ಉಳಿದಿವೆ. ಪ್ರಸ್ತುತ ದೇಶದಲ್ಲಿ 6 ರಾಷ್ಟ್ರೀಯ ಪಕ್ಷಗಳು ಹಾಗೂ 67 ರಾಜ್ಯ ಪಕ್ಷಗಳಿವೆ.

ಈ ಪಕ್ಷಗಳ ಕೈಬಿಡುವಿಕೆಯಿಂದ ಅವುಗಳಿಗಿದ್ದ ದೇಣಿಗೆ ಸ್ವೀಕರಿಸುವ ಹಕ್ಕು ಹಾಗೂ ಆದಾಯ ತೆರಿಗೆಯ ವಿನಾಯಿತಿ ರದ್ದಾಗಿದೆ. ಹಣ ಅಕ್ರಮ ವರ್ಗಾವಣೆ ತಡೆಗಟ್ಟುವಿಕೆ ಕಾಯ್ದೆ ಮತ್ತು ಆದಾಯ ತೆರಿಗೆ ಕಾಯ್ದೆಗಳ ಉಲ್ಲಂಘನೆ ಕೂಡಾ ಬಹುತೇಕ ಪ್ರಕರಣಗಳಲ್ಲಿ ಕಂಡುಬಂದಿದೆ ಎಂದು ಚುನಾವಣಾ ಆಯೋಗವು ಹೇಳಿದೆ.

ಕಳೆದ ಜೂನ್‌ನಲ್ಲಿ 345 ಪಕ್ಷಗಳ ವಿಚಾರಣೆ ನಡೆಸಿ, ನಿಯಮ ಉಲ್ಲಂಘನೆ ಮಾಡಿದ 334 ಪಕ್ಷಗಳನ್ನು ಕೈಬಿಡಲು ಚುನಾವಣಾ ಆಯೋಗ ತೀರ್ಮಾನಿಸಿತ್ತು. 11 ಪಕ್ಷಗಳ ಕಾರ್ಯವೈಖರಿಯನ್ನು ಮರುಪರಿಶೀಲಿಸಲು ಸಂಬಂಧಿತ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ.

ಆಯೋಗದ ಪ್ರಕಾರ, ನಿಷ್ಕ್ರಿಯ ರಾಜಕೀಯ ಪಕ್ಷಗಳ ಪಟ್ಟಿಯನ್ನು 2001ರಿಂದ ಮೂರರಿಂದ ನಾಲ್ಕು ಬಾರಿ ಪರಿಷ್ಕರಿಸಲಾಗಿದೆ ಮತ್ತು ಇದು ನಿರಂತರ ಪ್ರಕ್ರಿಯೆಯಾಗಿದೆ.

ಪಟ್ಟಿಯಿಂದ ಕೈಬಿಡುವ ಮುನ್ನ ಈ ರಾಜಕೀಯ ಪಕ್ಷಗಳಿಗೆ ಅವುಗಳ ಮೇಲಿರುವ ಆರೋಪಗಳ ಕುರಿತು ಆಕ್ಷೇಪಣೆ ಸಲ್ಲಿಸಲು 30 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು ಎಂದು ಚುನಾವಣಾ ಆಯೋಗವು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X