ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಮಾಜಿ ಕ್ರಿಕೆಟಿಗ ಶಿಖರ್ ಧವನ್ ಗೆ ಈಡಿ ಸಮನ್ಸ್

ಶಿಖರ್ ಧವನ್ (Photo: PTI)
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದೊಂದಿಗೆ ಸಂಬಂಧ ಹೊಂದಿರುವ ಅಕ್ರಮ ಬೆಟ್ಟಿಂಗ್ ಆ್ಯಪ್ ಕುರಿತು ವಿಚಾರಣೆಗೆ ಹಾಜರಾಗುವಂತೆ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಗೆ ಜಾರಿ ನಿರ್ದೇಶನಾಲಯ (ಈಡಿ) ಸಮನ್ಸ್ ಜಾರಿಗೊಳಿಸಿದೆ.
ಈ ಪ್ರಕರಣ ಆನ್ ಲೈನ್ ಬೆಟ್ಟಿಂಗ್ ಆ್ಯಪ್ 1xBetಗೆ ಸಂಬಂಧಿಸಿದ್ದು, ಶಿಖರ್ ಧವನ್ ಈ ಆ್ಯಪ್ ಪರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೀಗ ವಿಚಾರಣೆಗೆ ಹಾಜರಾಗುವಂತೆ ಹಾಗೂ ಪ್ರಚಾರ ಚಟುವಟಿಕೆಗಳಲ್ಲಿ ತಮ್ಮ ಪಾತ್ರವೇನು ಎಂಬುದನ್ನು ಸ್ಪಷ್ಟಪಡಿಸುವ ಮೂಲಕ ತನಿಖೆಯಲ್ಲಿ ಭಾಗಿಯಾಗುವಂತೆ ಶಿಖರ್ ಧವನ್ ಗೆ ಜಾರಿ ನಿರ್ದೇಶನಾಲಯ ಸೂಚಿಸಿದೆ.
ತನಿಖೆಯ ಭಾಗವಾಗಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಶಿಖರ್ ಧವನ್ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ ದಾಖಲಿಸಿಕೊಳ್ಳಲಿದೆ ಎಂದು ಹೇಳಲಾಗಿದೆ.
Next Story





