ಚುನಾವಣಾ ಸನ್ನದ್ಧತೆ : ಕಾಂಗ್ರೆಸ್ ಅಧ್ಯಕ್ಷ ಖರ್ಗೆಯವರಿಂದ ಉನ್ನತ ಮಟ್ಟದ ಸಭೆ
ಮಲ್ಲಿಕಾರ್ಜುನ ಖರ್ಗೆ | Photo: PTI
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಲೋಕಸಭಾ ಚುನಾವಣೆಗೆ ಪಕ್ಷದ ಸನ್ನದ್ಧತೆ ಮತ್ತು ಮುಂಬರುವ ಭಾರತ ನ್ಯಾಯ ಯಾತ್ರಾ ಕುರಿತು ಚರ್ಚಿಸಲು ಗುರುವಾರ ದೇಶಾದ್ಯಂತದ ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಪದಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.
ಇಲ್ಲಿಯ ಏಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು, ರಾಜ್ಯ ಘಟಕ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷ ನಾಯಕರು ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು.
ಸಾರ್ವತ್ರಿಕ ಚುನಾವಣೆಗಳಿಗೆ ಸನ್ನದ್ಧತೆಯ ಕುರಿತು ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈಗಾಗಲೇ ರಾಜ್ಯ ನಾಯಕರೊಂದಿಗೆ ಹಲವಾರು ಸುತ್ತುಗಳ ಚರ್ಚೆಗಳನ್ನು ನಡೆಸಿದ್ದಾರೆ.
Next Story