Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ನಿಯ ಕಿರುಕುಳ ತಾಳಲಾಗದೆ ಸಾವಿಗೆೆ...

ಪತ್ನಿಯ ಕಿರುಕುಳ ತಾಳಲಾಗದೆ ಸಾವಿಗೆೆ ಶರಣಾದ ಎಂಜಿನಿಯರ್: ಆತ್ಮಹತ್ಯೆಗೆ ಕಾರಣ ವೀಡಿಯೊದಲ್ಲಿ ದಾಖಲು

ವಾರ್ತಾಭಾರತಿವಾರ್ತಾಭಾರತಿ20 April 2025 9:37 PM IST
share
ಪತ್ನಿಯ ಕಿರುಕುಳ ತಾಳಲಾಗದೆ ಸಾವಿಗೆೆ ಶರಣಾದ ಎಂಜಿನಿಯರ್: ಆತ್ಮಹತ್ಯೆಗೆ ಕಾರಣ ವೀಡಿಯೊದಲ್ಲಿ ದಾಖಲು

ಲಕ್ನೋ: ಪತ್ನಿ ಹಾಗೂ ಆಕೆಯ ಮನೆಯವರ ಕಿರುಕುಳವನ್ನು ತಡೆಯಲಾರದೆ 33 ವರ್ಷ ವಯಸ್ಸಿನ ಎಂಜಿನಿಯರ್ ಒಬ್ಬರು ಸಾವಿಗೆ ಶರಣಾದ ಘಟನೆ ಉತ್ತರಪ್ರದೇಶದ ಇಟಾವಾ ಜಿಲ್ಲೆಯಲ್ಲಿ ರವಿವಾರ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಮೋಹಿತ್ ಯಾದವ್ ಎಂದು ಗುರುತಿಸಲಾಗಿದೆ. ತನ್ನ ವಿರುದ್ಧ ತನ್ನ ಪತ್ನಿಯ ಮನೆಯವರು ತನಗೆ ಬೆದರಿಕೆಗಳನ್ನು ಒಡ್ಡಿದ್ದಾರೆ ಹಾಗೂ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆಂದು ಮೋಹಿತ್ ಯಾದವ್ ಆತ್ಮಹತ್ಯೆಗೆ ಮುನ್ನ ರೆಕಾರ್ಡ್ ಮಾಡಿರುವ ವೀಡಿಯೊದಲ್ಲಿ ಆರೋಪಿಸಿದ್ದಾರೆ.

ಗುರುವಾರದಂದು ಇಟಾವಾ ರೈಲು ನಿಲ್ದಾಣದ ಹೊರಭಾಗದಲ್ಲಿರುವ ಜಾಲಿ ಹೋಟೆಲ್ ನಲ್ಲಿ ಯಾದವ್ ರೂಂ ಒಂದನ್ನು ಬಾಡಿಗೆ ಪಡೆದುಕೊಂಡಿದ್ದರು. ಆದರೆ ಮರುದಿನ ಬೆಳಗ್ಗೆ ಅವರು ಕೊಠಡಿಯನ್ನು ತೊರೆಯಲಿಲ್ಲ. ಸಂಜೆಯ ವೇಳೆಗೆ ಹೊಟೇಲ್ ನ ಸಿಬ್ಬಂದಿಯು ಮೋಹಿತ್ ನೇಣುಗಿಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದನ್ನು ಕಂಡರು ಎಂದು ನಗರ ಪೊಲೀಸ್ ಆಧೀಕ್ಷಕ ಅಭಯ್ನಾಥ್ ತ್ರಿಪಾಠಿ ತಿಳಿಸಿದ್ದಾರೆ.

ಔರಾಯಿಯಾ ಜಿಲ್ಲೆಯ ನಿವಾಸಿಯಾದ ಯಾದವ್ ಸಿಮೆಂಟ್ ಕಾರ್ಖಾನೆಯೊಂದರಲ್ಲಿ ಫೀಲ್ಡ್ ಎಂಜಿನಿಯರ್ ಆಗಿದ್ದರು. ಆತ ಹಾಗೂ ಪ್ರಿಯಾ ಏಳು ವರ್ಷಗಳ ಕಾಲ ಪ್ರೇಮಸಂಬಂಧವನ್ನು ಹೊಂದಿದ್ದು, 2023ರಲ್ಲಿ ಇಬ್ಬರೂ ವಿವಾಹವಾಗಿದ್ದರು.

ಎರಡು ತಿಂಗಳುಗಳ ಹಿಂದೆ ಪ್ರಿಯಾ ಅವರಿಗೆ ಖಾಸಗಿ ಶಿಕ್ಷಣಸಂಸ್ಥೆಯೊಂದರಲ್ಲಿ ಅಧ್ಯಾಪಕಿಯಾಗಿ ಕೆಲಸ ದೊರೆತಿತ್ತು. ಆಗ ಆಕೆ ಗರ್ಭಿಣಿಯಾಗಿದ್ದರು. ಆದರೆ ಪ್ರಿಯಾರ ತಾಯಿ ಆಕೆಯ ಗರ್ಭಪಾತ ಮಾಡಿಸಿದ್ದರೆಂದು ಯಾದವ್ ವೀಡಿಯೊದಲ್ಲಿ ಆಪಾದಿಸಿದ್ದಾರೆ.ತನ್ನ ಪತ್ನಿಯ ಎಲ್ಲಾ ಒಡವೆಗಳನ್ನು ಅತ್ತೆಯೇ ಇರಿಸಿಕೊಂಡಿದ್ದಳು. ವಿವಾಹವಾಗುವಾಗ ತಾನು ವರದಕ್ಷಿಣೆಯ ಬೇಡಿಕೆಯಿರಿಸಿರಲಿಲ್ಲ. ಆದರೆ ಪತ್ನಿಯು ತನ್ನ ಮನೆ ಹಾಗೂ ಆಸ್ತಿಯನ್ನು ಆಕೆಯ ಹೆಸರಿಗೆ ನೋಂದಾಯಿಸದೆ ಇದ್ದಲ್ಲಿ, ತನ್ನ ಕುಟುಂಬದ ಸದಸ್ಯರ ವಿರುದ್ಧ ವರದಕ್ಷಿಣೆ ಕಿರುಕುಳದ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆಯೊಡ್ಡಿದ್ದಳೆಂದು ಮೋಹಿತ್ ವೀಡಿಯೊದಲ್ಲಿ ಹೇಳಿದ್ದಾರೆ. ಆಕೆಯ ತಂದೆ ಮನೋಜ್ ಕುಮಾರ್ ಸುಳ್ಳು ದೂರನ್ನು ದಾಖಲಿಸಿದ್ದರು ಹಾಗೂ ಆಕೆಯ ಸಹೋದರನ್ನು ತನ್ನನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದ ಎಂದು ಯಾದವ್ ದೂರಿನಲ್ಲಿ ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕಾಗಿ ಹೆತ್ತವರ ಕ್ಷಮೆ ಯಾಚಿಸಿದ ಯಾದವ್, ಒಂದು ವೇಳೆ ತನ್ನ ಸಾವಿನ ಆನಂತರವೂ ತನಗೆ ನ್ಯಾಯ ದೊರೆಯದೆ ಇದ್ದಲ್ಲಿ ತನ್ನ ಚಿತಾಭಸ್ಮವನ್ನು ಚರಂಡಿಗೆ ಎಸೆಯಬೇಕೆಂದು ಆತ ಹೇಳಿದ್ದಾರೆ.

ಮಹಿಳೆಯರು ದಾಖಲಿಸುವ ಸುಳ್ಳು ದೂರುಗಳಿಂದ ಪುರುಷರನ್ನು ರಕ್ಷಿಸುವಂತಹ ಕಾನೂನು ದೇಶದಲ್ಲಿ ಇಲ್ಲದಿರುವ ಬಗ್ಗೆಯೂ ಆತ ಬೇಸರ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಪುರುಷರ ರಕ್ಷಣೆಗೂ ಕಾನೂನೇನಾದರೂ ಇದ್ದಲ್ಲಿ ತಾನು ಇಂತಹ ಹೆಜ್ಜೆಯನ್ನಿಡುವ ಪರಿಸ್ಥಿತಿ ಬರುತ್ತಿರಲಿಲ್ಲವೆಂದು ಆತ ಹೇಳಿದ್ದರು.

एक और अतुल सुभाष...! आखिरी वीडियो

यूपी के इटावा में अतुल सुभाष जैसा मामला ! पत्नी से परेशान होकर इंजीनियर मोहित यादव ने ली खुद की जान#uttarpradesh pic.twitter.com/1VD200IDOl

— NDTV India (@ndtvindia) April 20, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X