Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Fact-Check: ಮುಸ್ಲಿಂ ವಲಸಿಗರ ವಿರುದ್ಧ...

Fact-Check: ಮುಸ್ಲಿಂ ವಲಸಿಗರ ವಿರುದ್ಧ ಜರ್ಮನಿಯ ನರ್ಸ್ ಬರೆದಿದ್ದಾರೆನ್ನಲಾದ ವೈರಲ್ ಸಂದೇಶ ಸುಳ್ಳು

ವಾರ್ತಾಭಾರತಿವಾರ್ತಾಭಾರತಿ25 Dec 2023 7:26 PM IST
share
Fact-Check: ಮುಸ್ಲಿಂ ವಲಸಿಗರ ವಿರುದ್ಧ ಜರ್ಮನಿಯ ನರ್ಸ್ ಬರೆದಿದ್ದಾರೆನ್ನಲಾದ ವೈರಲ್ ಸಂದೇಶ ಸುಳ್ಳು

ಹೊಸ ದಿಲ್ಲಿ: ಜರ್ಮನಿಯ ನರ್ಸ್ ಒಬ್ಬರು ಬರೆದಿದ್ದಾರೆನ್ನಲಾದ ಮುಸ್ಲಿಂ ವಲಸಿಗರ ವಿರುದ್ಧದ ಸಂದೇಶವೊಂದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ, ನಿರ್ದಿಷ್ಟವಾಗಿ ವಾಟ್ಸ್ ಆ್ಯಪ್ ನಲ್ಲಿ ವೈರಲ್‌ ಆಗಿದೆ. ಮುಸ್ಲಿಂ ವಲಸಿಗರ ಕಾರಣಕ್ಕೆ ಜರ್ಮನಿಯ ಆಸ್ಪತ್ರೆಗಳಲ್ಲಿ ಸವಾಲಿನ ಹಾಗೂ ಅಸ್ಥಿರ ವೈದ್ಯಕೀಯ ಪರಿಸ್ಥಿತಿ ಇದೆ ಎಂದು ಆ ಸಂದೇಶದಲ್ಲಿ ಹೇಳಲಾಗಿತ್ತು.

ಈ ವೈರಲ್ ಸಂದೇಶವು ವಲಸಿಗರು, ನಿರ್ದಿಷ್ಟವಾಗಿ ಮುಸ್ಲಿಂ ವಲಸಿಗರ ಕುರಿತು ಸುಳ್ಳು ಮಾಹಿತಿ ಹೊಂದಿದೆ.

ವೈರಲ್‌ ಸಂದೇಶದಲ್ಲಿರುವುದೇನು?

ವಿಪರೀತ ವಲಸಿಗರ ಕಾರಣಕ್ಕೆ ಜರ್ಮನ್ ಆಸ್ಪತ್ರೆಗಳಲ್ಲಿ ಎದುರಾಗಿರುವ ತೊಂದರೆಗಳ ಕುರಿತು ನರ್ಸ್ ಒಬ್ಬರ ಅನುಭವವನ್ನು ವಿವರಿಸುತ್ತದೆ ಎಂಬ ಪ್ರತಿಪಾದನೆಯನ್ನುಳ್ಳ ವೈರಲ್ ಸಂದೇಶದ ಮುಖ್ಯಾಂಶಗಳು ಹೀಗಿವೆ:

► ಆಸ್ಪತ್ರೆಗಳು ತುಂಬಿ ತುಳುಕುತ್ತಿದ್ದು, ದೊಡ್ಡ ಪ್ರಮಾಣದ ವಲಸಿಗರನ್ನು ಆರೋಗ್ಯ ಸೇವೆ ನೀಡಲು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

► ಮುಸ್ಲಿಮರು ಮಹಿಳಾ ವೈದ್ಯಕೀಯ ಸಿಬ್ಬಂದಿಗಳಿಂದ ಚಿಕಿತ್ಸೆಯನ್ನು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

► ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ವಲಸಿಗರ ನಡುವೆ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಸ್ಪತ್ರೆಗಳ ಬಳಿ ಪೊಲೀಸರು ಹಾಗೂ ಕೆ-9 ಘಟಕಗಳನ್ನು ನಿಯೋಜಿಸಲಾಗಿದೆ

► ಯೂರೋಪ್ ದೇಶಗಳಲ್ಲಿ ಸಾಮಾನ್ಯವಾಗಿ ಚಿಕಿತ್ಸೆ ನೀಡಲಾಗದ ಏಡ್ಸ್, ಸಿಫಿಲಿಸ್ ಹಾಗೂ ಇನ್ನಿತರ ಗಂಭೀರ ಸಮಸ್ಯೆಗಳ ಕಾಯಿಲೆಗಳನ್ನು ಹಲವಾರು ವಲಸಿಗರು ಹೊಂದಿದ್ದಾರೆ.

► ಆಸ್ಪತ್ರೆಗಳಲ್ಲಿ ಕ್ಷೋಭೆಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಶಿಫಾರಸು ಮಾಡಲಾದ ಚಿಕಿತ್ಸೆಗೆ ಪಾವತಿಸಲು ವಲಸಿಗರು ನಿರಾಕರಿಸುತ್ತಿದ್ದಾರೆ.

► ಈ ಸಂಗತಿಗಳನ್ನು ವರದಿ ಮಾಡಲು ಸ್ಥಳೀಯ ಮಾಧ್ಯಮಗಳಿಗೆ ಅವಕಾಶ ನೀಡಲಾಗುತ್ತಿಲ್ಲ.

ಈ ಮೇಲಿನ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಸಂತ್ಯಾಂಶವೇನು?:

ಈ ವೈರಲ್ ಸಂದೇಶದ ಜಾಡು ಹುಡುಕಿದಾದ ಈ ಸಂದೇಶವು ಸಂಪೂರ್ಣ ಸುಳ್ಳು ಎಂದು ಪತ್ತೆಯಾಯಿದೆ. ಈ ಸಂದೇಶವನ್ನು ಸಮರ್ಥಿಸುವಂಥ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ.

ಈ ಸಂದೇಶದಲ್ಲಿ ಹೆಸರು, ದಿನಾಂಕಗಳು ಹಾಗೂ ಸ್ಥಳಗಳ ನಿರ್ದಿಷ್ಟ ವಿವರಗಳನ್ನು ಒದಗಿಸದೆ ಇರುವುದರಿಂದ ಅನುಮಾನಾಸ್ಪದವಾಗಿದೆ. ಅಲ್ಲದೇ ಈ ಸಂದೇಶದಲ್ಲಿ ಪರಿಶೀಲಿಸಬಲ್ಲ ಮಾಹಿತಿಗಳ ಕೊರತೆ ಇರುವುದರಿಂದ ಇದೊಂದು ಸುಳ್ಳು ಸುದ್ದಿ ಎಂಬುದು ಸ್ಪಷ್ಟವಾಗಿದೆ.

ಇದೇ ಮಾದರಿಯ ಅಲ್ಪ ಸ್ವಲ್ಪ ವ್ಯತ್ಯಾಸ ಇರುವ ಮೆಸೇಜುಗಳು 2015ರಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಪ್ರಸಾರವಾಗುತ್ತಿದೆ.

ಈ ಸಂದೇಶವು ನಿರ್ದಿಷ್ಟವಾಗಿ ಮುಸ್ಲಿಂ ವಲಸಿಗರ ಕುರಿತು ನಕಾರಾತ್ಮಕ ಧೋರಣೆಯನ್ನು ಪ್ರಚಾರ ಮಾಡಲು ಸೃಷ್ಟಿಸಿದಂತೆ ಕಂಡು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X