Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Uttar Pradesh | ಯೂಟ್ಯೂಬ್‌ ನೋಡಿ...

Uttar Pradesh | ಯೂಟ್ಯೂಬ್‌ ನೋಡಿ ‘ಶಸ್ತ್ರಚಿಕಿತ್ಸೆ’ ನಡೆಸಿದ ನಕಲಿ ವೈದ್ಯ; ಮಹಿಳೆ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ12 Dec 2025 12:55 PM IST
share
Uttar Pradesh | ಯೂಟ್ಯೂಬ್‌ ನೋಡಿ ‘ಶಸ್ತ್ರಚಿಕಿತ್ಸೆ’ ನಡೆಸಿದ ನಕಲಿ ವೈದ್ಯ; ಮಹಿಳೆ ಮೃತ್ಯು

ಬಾರಾಬಂಕಿ (ಉ.ಪ್ರ.), ಡಿ.12: ಯೂಟ್ಯೂಬ್‌ ವೀಡಿಯೊಗಳನ್ನು ನೋಡಿ ಶಸ್ತ್ರಚಿಕಿತ್ಸೆ ನಡೆಸಿದ ನಕಲಿ ವೈದ್ಯನ ನಿರ್ಲಕ್ಷ್ಯದಿಂದ 25 ವರ್ಷದ ಮಹಿಳೆಯೊಬ್ಬಳು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ.

ಮೃತರನ್ನು ಮುನಿಶಾರ ಎಂದು ಗುರುತಿಸಲಾಗಿದೆ. ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮುನಿಶಾರ, ದಸ್ರಾಪುರದಲ್ಲಿರುವ ಜ್ಞಾನಪ್ರಕಾಶ್ ಮಿಶ್ರಾ (48) ನಡೆಸುತ್ತಿದ್ದ ಕ್ಲಿನಿಕ್‌ ಗೆ ಭೇಟಿ ನೀಡಿದಾಗ, “ಪಿತ್ತಕೋಶದಲ್ಲಿ ಕಲ್ಲುಗಳು ಹೆಚ್ಚಿವೆ, ತಕ್ಷಣ ಶಸ್ತ್ರಚಿಕಿತ್ಸೆ ಅಗತ್ಯ” ಎಂದು ಆತ ವೈದ್ಯನಂತೆ ಹೇಳಿದ್ದಾನೆಂದು ಕುಟುಂಬದವರು ದೂರು ನೀಡಿದ್ದಾರೆ.

ಮುನಿಶಾರ ಪತಿ ತೇಜ್ ಬಹದ್ದೂರ್ ರಾವತ್‌ ಅವರ ದೂರಿನ ಪ್ರಕಾರ, ಮಿಶ್ರಾ ಮೊದಲು “ಇನ್ನೊಬ್ಬ ವೈದ್ಯರು ಶಸ್ತ್ರಚಿಕಿತ್ಸೆಗೆ ಬರುತ್ತಾರೆ” ಎಂದು ಹೇಳಿದ್ದರೂ, ಕೊನೆಗೆ ಯಾರೂ ಬರಲಿಲ್ಲ. ನಂತರ “ನಾನು ಯೂಟ್ಯೂಬ್‌ ನೋಡಿದರೆ ಸಾಕು, ವಿಧಾನ ಗೊತ್ತಿದೆ” ಎಂದು ಹೇಳಿ ಸ್ವತಃ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾನೆಂದು ಆರೋಪಿಸಲಾಗಿದೆ.

ಪ್ರಕ್ರಿಯೆ ತಪ್ಪಾಗಿದ್ದರಿಂದ ಮರುದಿನ ಮುನಿಶಾರ ಸ್ಥಿತಿ ಗಂಭೀರಗೊಂಡಿದ್ದು, ಪತಿ ಕ್ಲಿನಿಕ್‌ ಗೆ ತಲುಪುವಷ್ಟರಲ್ಲಿ ಆಕೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ವೈದ್ಯಕೀಯ ತಂಡ ನಡೆಸಿದ ಪರಿಶೀಲನೆಯಲ್ಲಿ ಮಿಶ್ರಾಗೆ ಯಾವುದೇ ಮಾನ್ಯ ವೈದ್ಯಕೀಯ ಅರ್ಹತೆ ಇಲ್ಲದಿರುವುದು ಬಹಿರಂಗವಾಗಿದೆ. ಅವನ ಕ್ಲಿನಿಕ್ ಕೂಡ ಆರೋಗ್ಯ ಇಲಾಖೆಯಲ್ಲಿ ನೋಂದಾಯಿಸಿರಲಿಲ್ಲ ಎಂದು ಬಾರಾಬಂಕಿ ಎಸ್‌ಪಿ ಅರ್ಪಿತ್ ವಿಜಯವರ್ಗಿಯ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ವೇಳೆ ಸಹಾಯ ಮಾಡಿದ ಆರೋಪಿಯ ಸೋದರಳಿಯನೂ ಪರಾರಿಯಾಗಿದ್ದು, ಇಬ್ಬರನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಘಟನೆ ತಿಳಿದ ಗ್ರಾಮಸ್ಥರು ಹಾಗೂ ಮೃತರ ಬಂಧುಗಳು ಕ್ಲಿನಿಕ್‌ ಎದುರು ಭಾರೀ ಪ್ರತಿಭಟನೆ ನಡೆಸಿದರು. ನಂತರ ಹಿರಿಯ ಅಧಿಕಾರಿಗಳು ತ್ವರಿತ ಕ್ರಮಕ್ಕೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.

ಕೋಥಿ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಮಾನವಲ್ಲದ ನರಹತ್ಯೆ ಅಪರಾಧ ಸೇರಿದಂತೆ ಹಲವು ಗಂಭೀರ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ. ತೇಜ್ ಬಹದ್ದೂರ್ ಕಾರ್ಮಿಕರಾಗಿದ್ದು, ದಂಪತಿಗೆ ಮೂವರು ಮಕ್ಕಳು ಇದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X