Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ | ಭೂಮಿ ಮಾರಾಟಕ್ಕೆ...

ಮಧ್ಯಪ್ರದೇಶ | ಭೂಮಿ ಮಾರಾಟಕ್ಕೆ ನಿರಾಕರಿಸಿದ ರೈತನ ಮೇಲೆ ಥಾರ್ ಜೀಪ್ ಹರಿಸಿ ಹತ್ಯೆ : ಬಿಜೆಪಿ ನಾಯಕನ ವಿರುದ್ಧ ಆರೋಪ

ವಾರ್ತಾಭಾರತಿವಾರ್ತಾಭಾರತಿ27 Oct 2025 11:10 AM IST
share
ಮಧ್ಯಪ್ರದೇಶ | ಭೂಮಿ ಮಾರಾಟಕ್ಕೆ ನಿರಾಕರಿಸಿದ ರೈತನ ಮೇಲೆ ಥಾರ್ ಜೀಪ್ ಹರಿಸಿ ಹತ್ಯೆ : ಬಿಜೆಪಿ ನಾಯಕನ ವಿರುದ್ಧ ಆರೋಪ
ರಕ್ಷಣೆಗೆ ಬಂದ ಪುತ್ರಿಯರ ಬಟ್ಟೆ ಹರಿದು ಹಲ್ಲೆ

ಫತೇಘರ್ (ಮಧ್ಯಪ್ರದೇಶ): ಭೂ ವಿವಾದದ ಹಿನ್ನೆಲೆಯಲ್ಲಿ ರೈತನೊಬ್ಬನನ್ನು ಬಿಜೆಪಿ ನಾಯಕನೊಬ್ಬ ಥಾರ್ ಜೀಪ್‌ ಹರಿಸಿ ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ ಫತೇಘರ್ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶಪುರ ಗ್ರಾಮದಲ್ಲಿ ನಡೆದಿದೆ.

ರೈತ ರಾಮ್ ಸ್ವರೂಪ್ ಧಾಕಡ್ ಅವರು ಪತ್ನಿಯೊಂದಿಗೆ ತಮ್ಮ ಹೊಲಕ್ಕೆ ತೆರಳುತ್ತಿದ್ದ ವೇಳೆ, ಬಿಜೆಪಿ ನಾಯಕ ಮಹೇಂದ್ರ ನಗರ ಮತ್ತು ಅವರ ಸಹಚರರು ದಾರಿಯಲ್ಲಿ ತಡೆದು ಕೋಲು ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಿದರು. ನಂತರ ಆರೋಪಿಗಳು ಥಾರ್ ಜೀಪ್‌ನಿಂದ ಅವರ ದೇಹದ ಮೇಲೆ ಹರಿಸಿದ್ದು, ರೈತ ಧಾಕಡ್ ಗಂಭೀರವಾಗಿ ಗಾಯಗೊಂಡಿದ್ದರು.

ಧಾಕಡ್ ಅವರನ್ನು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಸ್ಪತ್ರೆಗೆ ಕರೆದೊಯ್ಯಲು ಅವಕಾಶ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಸ್ಥಳದಲ್ಲೇ ಬಂದೂಕು ಹಿಡಿದು ಕಾವಲು ಕಾಯುತ್ತಿದ್ದರು. ಕೊನೆಗೆ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ವೇಳೆ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಬಿಜೆಪಿ ನಾಯಕ ಮಹೇಂದ್ರ ನಗರ ಕಳೆದ ಕೆಲ ತಿಂಗಳಿಂದ ಸಣ್ಣ ರೈತರಿಗೆ ತಮ್ಮ ಭೂಮಿಯನ್ನು ಮಾರಾಟ ಮಾಡಲು ಒತ್ತಡ ಹಾಕುತ್ತಿದ್ದರು. ಧಾಕಡ್ ಅವರು ಭೂಮಿ ಮಾರಾಟಕ್ಕೆ ನಿರಾಕರಿಸಿದ ಕಾರಣದಿಂದಲೇ ಈ ಹತ್ಯೆ ನಡೆದಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಧಾಕಡ್ ಅವರ ಪುತ್ರಿಯರು ಸಹಾಯಕ್ಕಾಗಿ ಸ್ಥಳಕ್ಕೆ ಧಾವಿಸಿದಾಗ, ಅವರ ಮೇಲೂ ಹಲ್ಲೆ ನಡೆಸಿ ಬಟ್ಟೆ ಹರಿದು ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

“ನನ್ನ ತಂದೆಯನ್ನು ಉಳಿಸಲು ಹೋದಾಗ ಅವರು ನನ್ನ ಮೇಲೂ ದಾಳಿ ನಡೆಸಿದರು, ಗುಂಡು ಹಾರಿಸಿದರು. ನನ್ನ ತಾಯಿ ಮಧ್ಯಪ್ರವೇಶಿಸಲು ಯತ್ನಿಸಿದಾಗ ಅವರು ಕಾರನ್ನು ತಂದೆಯ ಮೇಲೆ ಹರಿಸಿದರು,” ಎಂದು ರೈತನ ಮಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಆರೋಪಿಗಳು ಸುಮಾರು ಒಂದು ಗಂಟೆ ಕಾಲ ಹಲ್ಲೆ ನಡೆಸಿದರು. ಸುಮಾರು 20 ಜನರು ಗಾಳಿಯಲ್ಲಿ ಗುಂಡು ಹಾರಿಸಿ ಗ್ರಾಮಸ್ಥರಲ್ಲಿ ಭೀತಿ ಉಂಟುಮಾಡಿದರು,” ಮೃತ ರೈತನ ಸಹೋದರ ರಾಮ್‌ಕುಮಾರ್ ಹೇಳಿದ್ದಾರೆ.

ಮಹೇಂದ್ರ ನಗರ, ಅವರ ಕುಟುಂಬದ ಮೂವರು ಮಹಿಳೆಯರು ಸೇರಿದಂತೆ ಒಟ್ಟು 15 ಮಂದಿಯ ವಿರುದ್ಧ ಕೊಲೆ ಮತ್ತು ಇತರೆ ಆರೋಪಗಳಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ಸಂತ್ರಸ್ತರ ಕುಟುಂಬದಿಂದ ಹೇಳಿಕೆಗಳನ್ನು ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಶೋಧ ಮುಂದುವರಿದಿದೆ,” ಎಂದು ಫತೇಘರ್ ಠಾಣಾಧಿಕಾರಿ ಜಯನಾರಾಯಣ್ ಶರ್ಮಾ ತಿಳಿಸಿದ್ದಾರೆ.

“ಮಧ್ಯಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹಿಂಸಾಚಾರ, ಲೂಟಿ ಮತ್ತು ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆ. ಮುಖ್ಯಮಂತ್ರಿ ಗೃಹ ಸಚಿವರಾಗಿದ್ದರೂ, ಇಂತಹ ಘಟನೆಗಳು ಅವರ ಕಣ್ಗಾವಲಿನಲ್ಲಿಯೇ ನಡೆಯುತ್ತಿವೆ,” ಎಂದು ಬಮೋರಿಯ ಕಾಂಗ್ರೆಸ್ ಶಾಸಕ ರಿಷಿ ಅಗರ್ವಾಲ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕ ಮಹೇಂದ್ರ ನಗರ ಕಳೆದ ಹಲವು ವರ್ಷಗಳಿಂದ ಸಣ್ಣ ರೈತರನ್ನು ಬೆದರಿಸುತ್ತಿದ್ದು, ಸುಮಾರು 25 ಮಂದಿ ರೈತರು ತಮ್ಮ ಭೂಮಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಊರು ಬಿಟ್ಟಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X