"ನನ್ನ ಸ್ನೇಹಿತ, ನಾಯಕ": ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಸಹೋದರಿ ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಸಂದೇಶ

Photo: PTI
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು 54ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ರಾಜಕೀಯ ನಾಯಕರ ಸಹಿತ ಹಲವರು ಶುಭಾಶಯಗಳನ್ನು ಕೋರಿದ್ದಾರೆ.
ಸಹೋದರನ ಹುಟ್ಟುಹಬ್ಬಕ್ಕೆ ಪ್ರಿಯಾಂಕಾ ಗಾಂಧಿ ಶುಭಾಶಯ ಕೋರಿದ್ದು, ಎಕ್ಸ್ ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.
ರಾಹುಲ್ ಗಾಂಧಿ ಅವರನ್ನು "ಎಂದೆಂದಿಗೂ ನನ್ನ ಸ್ನೇಹಿತ, ವಾದಪ್ರಿಯ ಮಾರ್ಗದರ್ಶಕ, ತತ್ವಜ್ಞಾನಿ ಮತ್ತು ನಾಯಕ" ಎಂದು ಪ್ರಿಯಾಂಕಾ ಗಾಂಧಿ ಬರೆದಿದ್ದಾರೆ.
ಪ್ರಿಯಾಂಕಾ ಗಾಂಧಿ ಅವರು ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದು, ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.
Happy Birthday to my sweet brother ❤️ whose unique perspective on life, the universe and everything lights up the path.
— Priyanka Gandhi Vadra (@priyankagandhi) June 19, 2024
Always my friend, my fellow traveller, argumentative guide, philosopher and leader. Keep shining ⭐️⭐️⭐️, love you the most! pic.twitter.com/NYa8M0Gc33