ಹೊಸದಿಲ್ಲಿ | ಬವಾನಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ, ಕಟ್ಟಡ ಕುಸಿತ

Photo | PTI
ಹೊಸದಿಲ್ಲಿ: ದಿಲ್ಲಿಯ ಬವಾನಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಶನಿವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿ ಕಟ್ಟಡ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಿನ ಜಾವ 4.48ಕ್ಕೆ ಘಟನೆ ಬಗ್ಗೆ ಮಾಹಿತಿ ಬಂದಿದೆ. ಸ್ಥಳಕ್ಕೆ 17 ಅಗ್ನಿಶಾಮಕ ವಾಹನಗಳನ್ನು ಕಳುಹಿಸಿ ರಕ್ಷಣಾ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ದಿಲ್ಲಿ ಅಗ್ನಿಶಾಮಕ ದಳದ ಮುಖ್ಯಸ್ಥ ಅತುಲ್ ಗರ್ಗ್ ಮಾಹಿತಿ ನೀಡಿದ್ದಾರೆ.
ಬೆಂಕಿಯ ಪರಿಣಾಮವಾಗಿ ಆವರಣದೊಳಗೆ ಸ್ಫೋಟ ಸಂಭವಿಸಿದ್ದು, ಕಟ್ಟಡ ಕುಸಿದಿದೆ ಎಂದು ಡಿಎಫ್ಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story





