ಈಶಾನ್ಯ ಭಾರತದಲ್ಲಿ ಪ್ರವಾಹ: ಪರಿಹಾರ ಕಾರ್ಯಾಚರಣೆಗೆ ಚಾಲನೆ ನೀಡಿದ ಭಾರತೀಯ ಸೇನೆ; 3,800ಕ್ಕೂ ಹೆಚ್ಚು ಮಂದಿಯ ರಕ್ಷಣೆ

PC : PTI
ಗುವಾಹಟಿ: ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಭಾರತೀಯ ಸೇನೆಯು ವ್ಯಾಪಕ ಮಾನವೀಯ ನೆರವು ಹಾಗೂ ವಿಪತ್ತು ನಿರ್ವಹಣಾ ಕಾರ್ಯಾಚರಣೆಗೆ ಚಾಲನೆ ನೀಡಿದೆ ಎಂದು ಗುರುವಾರ ಬಿಡುಗಡೆ ಮಾಡಲಾಗಿರುವ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಪ್ರಾಂತ್ಯದಲ್ಲಿ ಇಲ್ಲಿಯವರೆಗೆ ಭಾರತೀಯ ಸೇನೆಯು 40 ಪರಿಹಾರ ತುಕಡಿಗಳನ್ನು ನಿಯೋಜಿಸಿದ್ದು, ಈವರೆಗೆ ಒಟ್ಟು 3,820 ಮಂದಿಯನ್ನು ರಕ್ಷಿಸಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಜಲ್ ರಾಹತ್-2 ಕಾರ್ಯಾಚರಣೆಯ ಹೆಸರಿನಲ್ಲಿ ಭಾರತೀಯ ಸೇನಾಪಡೆ ಈ ಪರಿಹಾರ ಕಾರ್ಯಾಚರಣೆಗಿಳಿದಿದ್ದು, ನಾಗಾಲ್ಯಾಂಡ್, ಅಸ್ಸಾಂ ಹಾಗೂ ಮಣಿಪುರದಾದ್ಯಂತ ಸಮನ್ವಯದ ತುಕಡಿ ನಿಯೋಜನೆ ಮಾಡಿದೆ.
"ಈ ಪ್ರಯತ್ನಗಳನ್ನು ಅಸ್ಸಾಂ ರೈಫಲ್ಸ್ (ಉತ್ತರ) ಪೊಲೀಸ್ ಮಹಾ ನಿರ್ದೇಶಕರ ಮುಖ್ಯ ಕಚೇರಿಯ ನೇತೃತ್ವ ಹಾಗೂ ಸ್ಥಳೀಯ ಸಂಸ್ಥೆಗಳ ಆಡಳಿತದ ಸಹಯೋಗದೊಂದಿಗೆ ಕೈಗೆತ್ತಿಕೊಳ್ಳಲಾಗಿದೆ" ಎಂದು ಈ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





